ಕೋಲ್ಕತ್ತ: ನಾರದ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಮತ್ತು ಇತರ ಮೂವರಿಗೆ ವಿಶೇಷ ನ್ಯಾಯಾಲಯ ಬುಧವಾರ ಸಮನ್ಸ್ ನೀಡಿದೆ.

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ದೂರಿನ ಅನ್ವಯ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕಿಮ್ ಮತ್ತು ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ, ಕೋಲ್ಕತ್ತದ ಮಾಜಿ ಮೇಯರ್ ಸೋವನ್ ಚಟರ್ಜಿ ಹಾಗೂ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ಎಸ್‌ಎಂಎಚ್ ಮಿರ್ಜಾ ಅವರಿಗೆ ಈ ಸಮನ್ಸ್ ನೀಡಲಾಗಿದೆ.

ನವೆಂಬರ್ 16ರಂದು ನ್ಯಾಯಾಲಯ ಮುಂದೆ ಹಾಜರಾಗುವಂತೆ ವಿಶೇಷ ಸಿಬಿಐ ನ್ಯಾಯಾಧೀಶರು ಆದೇಶಿಸಿದ್ದಾರೆ.

ಮುಖರ್ಜಿ, ಹಕಿಮ್ ಮತ್ತು ಮಿತ್ರಾ ಅವರಿಗೆ ಪಶ್ಚಿಮ ಬಂಗಾಳ ವಿಧಾನಭೆ ಸ್ಪೀಕರ್ ಅವರ ಮೂಲಕ ಸಮನ್ಸ್ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಉಳಿದವರಿಗೆ ನೇರವಾಗಿ ಅವರ ವಿಳಾಸಕ್ಕೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.