ನವದೆಹಲಿ: ದೆಹಲಿಯಿಂದ ಪಟ್ನಾಗೆ ತೆರಳಬೇಕಿದ್ದ ಸ್ಪೈಸ್ಜೆಟ್ ವಿಮಾನವು ಎರಡು ಗಂಟೆಗೂ ಹೆಚ್ಚು ಕಾಲ ವಿಳಂಬವಾದ್ದರಿಂದ ಪ್ರಯಾಣಿಕರು ಹಾಗೂ ವಿಮಾನಯಾನ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಇಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್–3ರಿಂದ ಸ್ಪೈಸ್ಜೆಟ್ ವಿಮಾನವು ಬೆಳಿಗ್ಗೆ 7.20 ಕ್ಕೆ ಪ್ರಯಾಣ ಆರಂಭಿಸಬೇಕಿತ್ತು. ಆದರೆ, 10 ಗಂಟೆ ಸುಮಾರಿಗೆ ಹೊರಟಿತು ಎಂದು ಪ್ರಯಾಣಿಕರೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಮೊದಲಿಗೆ, ಹವಾಮಾನ ವೈಪರೀತ್ಯದ ಕಾರಣದಿಂದಾಗಿ ವಿಮಾನ ಹೊರಡುವುದು ವಿಳಂಬವಾಗುತ್ತದೆ ಎಂದು ಸ್ಪೈಸ್ಜೆಟ್ ಸಿಬ್ಬಂದಿ ಹೇಳಿದ್ದರು. ಆದರೆ ವಿಳಂಬಕ್ಕೆ ತಾಂತ್ರಿಕ ಸಮಸ್ಯೆಗಳು ಕಾರಣ ಎಂಬುದು ಬಳಿಕ ಗೊತ್ತಾಯಿತು ಎಂದು ಅವರು ತಿಳಿಸಿದ್ದಾರೆ.

ಈ ವೇಳೆ ಅನೇಕ ಪ್ರಯಾಣಿಕರು ಮತ್ತು ಸ್ಪೈಸ್ಜೆಟ್ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ತಾಂತ್ರಿಕ ಸಮಸ್ಯೆಯಿಂದಾಗಿ ಸಂಚಾರ ವಿಳಂಬವಾಗಿತ್ತು ಎಂದು ಸ್ಪೈಸ್ಜೆಟ್ನ ವಕ್ತಾರರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಜಮ್ಮು & ಕಾಶ್ಮೀರ ಹಣಕಾಸು ಇಲಾಖೆ ನೇಮಕಾತಿ ಅಕ್ರಮ: 37 ಸ್ಥಳಗಳಲ್ಲಿ ಸಿಬಿಐ ಶೋಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.