ನವದೆಹಲಿ: ಕೋವಿಡ್–19 ವಿರುದ್ಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ಲೈಟ್ ಏಕ ಡೋಸ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಅನುಮತಿ ನೀಡಿದೆ.

ಸ್ಪುಟ್ನಿಕ್ ಲೈಟ್ ಕೋವಿಡ್ ವಿರುದ್ಧ ಶೇ 78.6ರಿಂದ ಶೇ 83.7ರಷ್ಟು ಪರಿಣಾಮಕಾರಿಯಾಗಿದೆ ಎಂಬ ಅಧ್ಯಯನ ವರದಿ ಇತ್ತೀಚೆಗೆ ಪ್ರಕಟವಾಗಿತ್ತು. ಅದರ ಬೆನ್ನಲ್ಲೇ ಡಿಸಿಜಿಐ ಅನುಮೋದನೆ ನೀಡಿದೆ.

ಓದಿ:ವಿಶ್ವದಲ್ಲೇ ಅತಿ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಿದ ರಾಷ್ಟ್ರ ಭಾರತ: ಕೇಂದ್ರ

ಅರ್ಜೆಂಟೀನಾದಲ್ಲಿ 40,000 ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಈ ವೇಳೆ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಮಾಡುವಲ್ಲಿ ಸ್ಪುಟ್ನಿಕ್ ಲೈಟ್ ಶೇ 82.1ರಿಂದ ಶೇ 87.6ರಷ್ಟು ಪರಿಣಾಮಕಾರಿಯಾಗಿರುವುದು ತಿಳಿದುಬಂದಿತ್ತು.

ಸ್ಪುಟ್ನಿಕ್ ಲೈಟ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲು ಡಿಸಿಜಿಐ ತಜ್ಞರ ಸಮಿತಿ ಜುಲೈಯಲ್ಲಿ ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.