ನವದೆಹಲಿ: ಬರ ಪರಿಹಾರ ಬಿಡುಗಡೆಗೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿದೆ.

ಬರದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಪರಿಹಾರ ಕೊಡುತ್ತಿಲ್ಲ; ನೆರವಿಗೂ ಬರುತ್ತಿಲ್ಲ ಎಂದು ಆಪಾದಿಸಿದ್ದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ತನ್ನ ಹೋರಾಟವನ್ನು ಸುಪ್ರೀಂ ಕೋರ್ಟ್‌ವರೆಗೆ ಒಯ್ದಿತ್ತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿ ಆರ್‌ಎಫ್) ತಕ್ಷಣ ಹಣ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕೇಂದ್ರದ ವಿರುದ್ಧ ರಾಜ್ಯ ಈ ಹಿಂದೆ ನಡೆಸುತ್ತಿರುವ ಹೋರಾಟ ಮತ್ತೊಂದು ಆಯಾಮ ಪಡೆದಿದೆ. ಕೇಂದ್ರದ ಜತೆ ರಾಜ್ಯ ಸರ್ಕಾರ ಪತ್ರ ವ್ಯವಹಾರ ನಡೆಸಿತ್ತು. ರಾಜ್ಯ ಸಚಿವರ ನಿಯೋಗವು ಕೇಂದ್ರ ಸಚಿವರನ್ನು ಭೇಟಿ ಮಾಡಿತ್ತು. ಪ್ರಧಾನಿ ಮತ್ತು ಗೃಹ ಸಚಿವರಿಗೆ ರಾಜ್ಯ ಸರ್ಕಾರದಿಂದ ಮನವಿಯನ್ನೂ ಸಲ್ಲಿಸಲಾಗಿತ್ತು. ಹಲವು ಸುತ್ತಿನ ಆಪಾದನಾ ಪರ್ವಗಳನ್ನು ನಡೆಸಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಸಚಿವ, ಶಾಸಕರ ದಂಡಿನೊಂದಿಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿಯನ್ನೂ ನಡೆಸಿ ದೇಶದ ಗಮನ ಸೆಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.