ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ ರದ್ದುಪಡಿಸಲಾದ ಸೆಕ್ಷನ್ 66ಎ ಅಡಿಯಲ್ಲಿ ಈಗಲೂ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಹೈಕೋರ್ಟ್‌ಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಸರ್ಕಾರೇತರ ಸಂಘಟನೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (ಪಿಯುಸಿಎಲ್) ಸಲ್ಲಿಸಿರುವ ಅರ್ಜಿಯ ಮೇರೆಗೆ ಪೊಲೀಸ್ ವಿಷಯ ರಾಜ್ಯಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್ ಮತ್ತು ಬಿ.ಆರ್.ಗವಾಯಿ ಅವರಿದ್ದ ಪೀಠ ಈ ನೋಟಿಸ್ ಜಾರಿಗೊಳಿಸಿತು. ‘ನಾವು ಇದರ ಬಗ್ಗೆ ಒಂದು ಸಮಗ್ರ ಆದೇಶವನ್ನು ಹೊರಡಿಸಿ ವಿಷಯವನ್ನು ಶಾಶ್ವತವಾಗಿ ಕೊನೆಗೊಳಿಸಬಹುದಾಗಿದೆ’ ಎಂದು ಪೀಠ ಹೇಳಿತು.

ಈ ನೋಟಿಸ್‌ಗೆ ನಾಲ್ಕು ವಾರದೊಳಗೆ ಉತ್ತರ ನೀಡಬೇಕು ಎಂದು ಪೀಠ ಸೂಚಿಸಿತು.

ರಾಜ್ಯಗಳ ಹೊಣೆ: ಇದಕ್ಕೆ ಮೊದಲು ಪೀಠದ ಮುಂದೆ ಪ್ರಮಾಣಪತ್ರ ಸಲ್ಲಿಸಿದ ಕೇಂದ್ರ ಸರ್ಕಾರ, ಸಂವಿಧಾನದಲ್ಲಿನ ನಿಯಮಗಳ ಅನುಸಾರ 'ಪೊಲೀಸ್' ಮತ್ತು 'ಸಾರ್ವಜನಿಕ ಆದೇಶ'ಗಳು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿಷಯಗಳಾಗಿದ್ದು, ‘ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಎ ರದ್ದುಗೊಳಿಸಿ ಆದೇಶಿಸಿರುವ 2015ರ‘ ತೀರ್ಪನ್ನು ಜಾರಿಗೊಳಿಸುವ ಪ್ರಾಥಮಿಕ ಜವಾಬ್ದಾರಿಯೂ ರಾಜ್ಯ ಸರ್ಕಾರಗಳ ಕಾನೂನು ಜಾರಿ ಸಂಸ್ಥೆಗಳಿಗೆ ಸೇರಿದೆ ಎಂದು ಹೇಳಿತ್ತು.

2015ರಲ್ಲಿ ರದ್ದಾಗಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಎ ದುರ್ಬಳಕೆಯಾಗುತ್ತಿದೆ. ಈ ಕಾಯ್ದೆಯನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಆರೋಪಿಸಿ ಪಿಯುಸಿಎಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿತ್ತು.

ರದ್ದಾಗಿರುವ ಸೆಕ್ಷನ್ ಅಡಿಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರಮಣಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವ ವ್ಯಕ್ತಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಮತ್ತು ದಂಡ ವಿಧಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.