ಚೆನ್ನೈ: ತಮಿಳುನಾಡಿನ ತೂತ್ತುಕುಡಿಯಲ್ಲಿರುವ ವೇದಾಂತ ಕಂಪನಿ ಒಡೆತನದ ಸ್ಟರ್ಲೈಟ್ ತಾಮ್ರ ಘಟಕದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಬುಧವಾರ ಆರಂಭಗೊಂಡಿತು.

‘ಘಟಕದಲ್ಲಿ ಕಂಡುಬಂದಿದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದ್ದು, ಈಗ ವೈದ್ಯಕೀಯ ಆಮ್ಲಜನಕ ಉತ್ಪಾದನೆಯನ್ನು ಪುನರಾರಂಭಿಸಿಲಾಗಿದೆ ಎಂದು ತಿಳಿಸಲು ಸಂತಸವಾಗುತ್ತಿದೆ’ ಎಂದು ಕಂಪನಿ ಪ್ರಕಟಣೆಯಲ್ಲಿ ಹೇಳಿದೆ.

ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಿ, ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಯಿತು. ಈ ಹಿನ್ನೆಲೆಯಲ್ಲಿ ಮೇ 13ರಂದು ಈ ಘಟಕದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆಗೆ ಚಾಲನೆ ನೀಡಲಾಯಿತು. ಆದರೆ, ಎರಡು ದಿನಗಳ ನಂತರ, ಈ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಆಮ್ಲಜನಕ ಉತ್ಪಾದನೆಯನ್ನು ಕಂಪನಿ ಸ್ಥಗಿತಗೊಳಿಸಿತ್ತು.

ಇಸ್ರೊದ ತಜ್ಞರನ್ನು ಒಳಗೊಂಡ ತಂಡ ಘಟಕಕ್ಕೆ ಭೇಟಿ ನೀಡಿ, ತಾಂತ್ರಿಕ ದೋಷವನ್ನು ನಿವಾರಿಸಿತು ಎಂದೂ ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.