ತ್ರಿಶೂರ್: ಕೇರಳದ ತ್ರಿಶೂರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ಮೇಲೆ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿದ್ದು ರೈಲಿನ ಎರಡು ಕಿಟಕಿಗಳಿಗೆ ಹಾನಿಯಾಗಿದೆ.

ಶುಕ್ರವಾರ ಬೆಳಿಗ್ಗೆ 9.30ರ ಹೊತ್ತಿಗೆ ತಿರುವನಂತಪುರದಿಂದ ಕಾಸರಗೋಡಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ತ್ರಿಶೂರ್ನಲ್ಲಿ ಪ್ಲಾಟ್ಫಾರ್ಮ್ 2ರಲ್ಲಿ ನಿಂತಿತ್ತು. ಈ ವೇಳೆ ವ್ಯಕ್ತಿಯೊಬ್ಬ ಕಲ್ಲೆಸೆದಿದ್ದಾನೆ, ಘಟನೆಯಲ್ಲಿ ಯಾವೊಬ್ಬ ಪ್ರಯಾಣಿಕರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

‘ಘಟನೆ ಸಂಬಂಧ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಹೆಚ್ಚು ಮಾತನಾಡುತ್ತಿಲ್ಲ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಶಂಕೆಯಿದೆ. ಅಲ್ಲದೆ ಆತ ಸ್ಥಳೀಯ ವ್ಯಕ್ತಿಯೂ ಅಲ್ಲ. ವೈದ್ಯಕೀಯ ಚಿಕಿತ್ಸೆ ಕೊಡಿಸಿ ಕೋರ್ಟ್ಗೆ ಹಾಜರುಪಡಿಸುತ್ತೇವೆ. ಬಳಿಕ ಕೋರ್ಟ್ನಲ್ಲಿ ಮನವಿ ಮಾಡಿ ಆತನಿಗೆ ಅಗತ್ಯವಿರುವ ಮಾನಸಿಕ ಚಿಕಿತ್ಸೆಯನ್ನು ಕೊಡಿಸಲಾಗುತ್ತದೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.