ಲಖನೌ: ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚು ಕಳವಳಕಾರಿಯಾಗಿದ್ದು, ಇದನ್ನು ತಡೆಗಟ್ಟಲು ರಾಜಕೀಯ ಪಕ್ಷಗಳು ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಆಗ್ರಹಿಸಿದ್ದಾರೆ.

ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಮತ್ತು ದೇಶದ ವಿವಿಧೆಡೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಕುರಿತು ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಯಾವತಿ ಈ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರದ ಬದ್ಲಾಪುರ, ಆಗ್ರಾ, ಕನೌಜ್ ಮತ್ತು ಉತ್ತರ ಪ್ರದೇಶ ಫರೂಖಾಬಾದ್ ಜಿಲ್ಲೆಗಳಲ್ಲಿ ಮುಗ್ಧ ಹುಡುಗಿಯರು ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ಆತ್ಮಹತ್ಯೆ ಘಟನೆಗಳು ಅತ್ಯಂತ ದುಃಖಕರ ಮತ್ತು ಕಳವಳಕಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳು ಪಕ್ಷ ರಾಜಕೀಯವನ್ನು ಮೀರಿ ಈ ವಿಷಯಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಿಂದಾಗಿ ಇಂತಹ ಘಟನೆಗಳನ್ನು ತಡೆಗಟ್ಟಬಹುದು. ಈ ವಿಚಾರಗಳ ಸೋಗಿನಲ್ಲಿ ರಾಜಕೀಯ ಮಾಡಬಾರದು. ಇದು ಇಂದಿನ ಅಗತ್ಯವಾಗಿದೆ ಮತ್ತು ಮಹಿಳೆಯರ ಹಿತಾಸಕ್ತಿಯೂ ಆಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ.
.ಮಹಿಳೆಯರ ಸುರಕ್ಷತೆ | ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅಸಡ್ಡೆ: ಸಿಎಂ ಆದಿತ್ಯನಾಥ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.