ತಿರುವನಂತಪುರ: ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಅವರಿಂದ ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮನೋಹರನ್ (51) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಸೇತುರಾಮನ್ ಅವರು ಸಬ್ ಇನ್‌ಸ್ಪೆಕ್ಟರ್ ಜಿಮ್ಮಿ ಜೋಸ್ ಅವರನ್ನು ಅಮಾನತುಗೊಳಿಸಿ ಭಾನುವಾರ ಆದೇಶ ಹೊರಡಿಸಿದ್ದಾರೆ.

ಕುಡಿದು ವಾಹನ ಚಲಾಯಿಸುತ್ತಿದ್ದ ಆರೋಪದ ಮೇಲೆ ಮನೋಹರನ್ ಅವರನ್ನು ಶನಿವಾರ ರಾತ್ರಿ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಪಾಳಕ್ಕೆ ಹೊಡೆದಿದ್ದರು. ಇದರಿಂದ ಕುಸಿದು ಬಿದ್ದ ಮನೋಹರನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮನೋಹರನ್ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.

ಸಬ್ ಇನ್‌ಸ್ಪೆಕ್ಟರ್ ಅವರನ್ನು ಕೇವಲ ಅಮಾನತು ಮಾಡಿದರೆ ಸಾಲದು. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಆಗ್ರಹಿಸಿದ್ದಾರೆ.

ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆಯ ಕಾರ್ಯವೈಖರಿ ವಿರುದ್ಧ ತಾವು ಮೇಲಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿರುವುದಾಗಿಯೂ ಹೇಳಿರುವ ಅವರು, ರಾಜ್ಯ ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಇಲ್ಲಿನ ಯುವ ಕಾಂಗ್ರೆಸ್ ಮತ್ತು ಬಿಜೆಪಿ, ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಕ್ರಮಕ್ಕೆ ಆಗ್ರಹಿಸಿವೆ.

ಮನೋಹರನ್ ದಿನಕೂಲಿ ನೌಕರನಾಗಿದ್ದು, ಎಂದೂ ಮದ್ಯ ಸೇವಿಸಿದವನಲ್ಲ. ಆತನದು ಹೆಂಡತಿ ಮತ್ತು ಇಬ್ಬರು ಮಕ್ಕಳನ್ನೊಳಗೊಂಡ ಚಿಕ್ಕ ಕುಟುಂಬ ಎಂದು ಸ್ಥಳೀಯರೊಬ್ಬರು ಐಎಎನ್‌ಎಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇವನ್ನೂ ಓದಿ: ನೀರವ್, ಲಲಿತ್ ಅವರನ್ನು ಟೀಕಿಸಿದರೆ ಬಿಜೆಪಿ ನೊಂದುಕೊಳ್ಳುವುದೇಕೆ: ಖರ್ಗೆ ಪ್ರಶ್ನೆ

ಕರಾವಳಿ ಕಾವಲು ಪಡೆ ಹೆಲಿಕಾಪ್ಟರ್ ಕೊಚ್ಚಿಯಲ್ಲಿ ಟೇಕ್–ಆಫ್ ವೇಳೆ ಪತನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.