ಲಖನೌ: ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವೊಂದರಲ್ಲಿ ನಟಿ ಸನ್ನಿ ಲಿಯೋನ್ ಭಾವಚಿತ್ರವಿದ್ದು, ಈ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ.

ನಟಿಯ ಭಾವಚಿತ್ರವಿರುವ ಪ್ರವೇಶ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.

ಕನೌಜ್ ಜಿಲ್ಲೆಯ ತಿರ್ವಾ ಪಟ್ಟಣದ ಎಸ್.ಎಸ್.ಸ್ಮಾರಕ ಬಾಲಕಿಯರ ಕಾಲೇಜಿನಲ್ಲಿ ನಡೆದ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಯೊಬ್ಬರ ಪ್ರವೇಶ ಪತ್ರದಲ್ಲಿ ನಟಿಯ ಭಾವಚಿತ್ರ ಇತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಪ್ರವೇಶ ಪತ್ರ ನಕಲಿ ಇರಬಹುದು. ಅರ್ಜಿ ಭರ್ತಿ ಮಾಡುವ ವೇಳೆ ನಟಿಯ ಭಾವಚಿತ್ರವನ್ನು ಅಪ್‌ಲೋಡ್ ಮಾಡಿರುವ ಸಾಧ್ಯತೆ ಇದೆ. ಇದು ಕುಚೇಷ್ಟೆಯೂ ಇರಬಹುದು’ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.ಪ್ರವೇಶ ಪತ್ರದಲ್ಲಿ ತಪ್ಪಾದ ಭಾವಚಿತ್ರ ಕಾಣಿಸಿಕೊಂಡಿದ್ದ ಸಂದರ್ಭದಲ್ಲಿ, ತಮ್ಮ ಒಂದು ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ತರುವಂತೆ ಎಲ್ಲ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿತ್ತು ಎಂದೂ ತಿಳಿಸಿದ್ದಾರೆ.

ಕಾನ್‌ಸ್ಟೆಬಲ್ ನೇಮಕಾತಿಗಾಗಿ ಶನಿವಾರ ಹಾಗೂ ಭಾನುವಾರ ರಾಜ್ಯದಾದ್ಯಂತ ಪರೀಕ್ಷೆಗಳು ನಡೆದಿವೆ. 60 ಸಾವಿರ ಹುದ್ದೆಗಳಿಗೆ 48 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.