ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35–ಎ ಪ್ರಶ್ನಿಸಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ಕಲಂ ‘35–ಎ’ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು. ಆಗಸ್ಟ್ 27ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಕಲಂ 35–ಎ ಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸ್ವಯಂಸೇವಾ ಸಂಸ್ಥೆಯೊಂದು ಅರ್ಜಿ ಸಲ್ಲಿಸಿತ್ತು. ಬಲಪಂಥೀಯ ಸಂಘಟನೆಗಳ ಬೆಂಬಲದೊಂದಿಗೆ ಈ ಅರ್ಜಿ ಸಲ್ಲಿಕೆಯಾಗಿದೆ.

ದೇಶದ ಯಾವುದೇ ಭಾಗದಲ್ಲಿ ಆಸ್ತಿ ಹೊಂದಲು ಮತ್ತು ವಾಸ ಮಾಡಲು ಭಾರತದ ನಾಗರಿಕರಿಗೆ ಮೂಲಭೂತ ಹಕ್ಕಿದೆ. ಇದನ್ನು 35–ಎ ಉಲ್ಲಂಘಿಸುತ್ತದೆ. ಅಲ್ಲದೆ, ದೇಶದ ಸಂವಿಧಾನಕ್ಕೆ ಸಂಸತ್ನಲ್ಲಿ ಮಾತ್ರ ತಿದ್ದುಪಡಿ ತರಲು ಸಾಧ್ಯ. ಆದರೆ 35–ಎಯನ್ನು ಸಂಸತ್ನ ಹೊರಗೆ, ರಾಷ್ಟ್ರಪತಿಗಳು ವಿಶೇಷಾಧಿಕಾರ ಬಳಸಿ ಅಧಿಸೂಚನೆ ಹೊರಡಿಸಿದ್ದಾರೆ ಎಂಬುದು ಅರ್ಜಿದಾರರ ವಾದ.

ರಾಜ್ಯದವರ ವಾದವೇನು?
35–ಎ ರದ್ದಾದರೆ ಇಡೀ ರಾಜ್ಯದ ಜನಸಂಖ್ಯೆ ಮತ್ತು ಜನಾಂಗೀಯ ಸ್ವರೂಪವೇ ಏರುಪೇರಾದೀತು ಎಂಬುದು ಅಲ್ಲಿನವರ ಆತಂಕ. 35–ಎ ರದ್ದುಪಡಿಸುವುದಕ್ಕೆ ಪ್ರತ್ಯೇಕತಾವಾದಿ ಸಂಘಟನೆಗಳೂ ತೀವ್ರ ವಿರೋಧ ವ್ಯಕ್ತಪಡಿಸಿವೆ.

* ಇವನ್ನೂ ಓದಿ...

*ಜಮ್ಮು, ಕಾಶ್ಮೀರ ನಾಗರಿಕರಿಗೆ ವಿಶೇಷಾಧಿಕಾರ: ‘ಸುಪ್ರೀಂ’ನಲ್ಲಿ ಇಂದು ವಿಚಾರಣೆ

* ಕಾಶ್ಮೀರ ಬಂದ್, ಜನಜೀವನ ಅಸ್ತವ್ಯಸ್ತ
ಕಲಂ 35–ಎ ಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮುಂದಾಗಿರುವುದನ್ನು ಪ್ರತಿಭಟಿಸಿ ಪ್ರತ್ಯೇಕವಾದಿಗಳು ಕರೆ ನೀಡಿದ್ದ ಎರಡು ದಿನಗಳ ಬಂದ್ಗೆ ಭಾನುವಾರ ಕಾಶ್ಮೀರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.