ನವದೆಹಲಿ: ಹೊಂದಾಣಿಕೆ ಮಾಡಿದ ಒಟ್ಟು ವರಮಾನ (ಎಜಿಆರ್) ಬಾಕಿಯ ಲೆಕ್ಕಾಚಾರದಲ್ಲಿ ತಪ್ಪುಗಳಿವೆ ಎಂದು ವೊಡಾಫೋನ್–ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಸೇರಿದಂತೆ ಟೆಲಿಕಾಂ ಕಂಪನಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿತು.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ನೇತೃತ್ವದ ನ್ಯಾಯಪೀಠ, ‘ಇದೇ ವಿಷಯವಾಗಿ ಸಲ್ಲಿಸಲಾಗಿರುವ ಇತರ ಅರ್ಜಿಗಳನ್ನು ಸಹ ವಜಾಗೊಳಿಸಲಾಗಿದೆ’ ಎಂದು ಹೇಳಿತು.

‘ಪಾವತಿಸಬೇಕಾದ ಎಜಿಆರ್ ಬಾಕಿ ಮೊತ್ತವನ್ನು ತಪ್ಪಾಗಿ ಲೆಕ್ಕ ಹಾಕಲಾಗಿದೆ. ಬಾಕಿ ಲೆಕ್ಕಾಚಾರದಲ್ಲಿ ಪುನರಾವರ್ತನೆಯೂ ಆಗಿದೆ’ ಎಂದು ದೂರಿ ಕಂಪನಿಗಳು ಅರ್ಜಿ ಸಲ್ಲಿಸಿದ್ದವು. ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಅಂತಿಮ ಆದೇಶವನ್ನು ನಂತರ ಪ್ರಕಟಿಸುವುದಾಗಿ ಜುಲೈ 19ರಂದು ತಿಳಿಸಿತ್ತು.

ಎಜಿಆರ್ ಪಾವತಿಗೆ 15 ವರ್ಷಗಳ ಕಾಲಾವಕಾಶ ನೀಡುವಂತೆ ಕೋರಿ ಟೆಲಿಕಾಂ ಕಂಪನಿಗಳು ಈ ಹಿಂದೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಕೆಲವು ಷರತ್ತುಗಳನ್ನು ವಿಧಿಸಿ ಎಜಿಆರ್ ಪಾವತಿಗೆ 10 ವರ್ಷಗಳ ಕಾಲಾವಕಾಶ ನೀಡಿ ಕಳೆದ ವರ್ಷ ಸೆಪ್ಟಂಬರ್ನಲ್ಲಿ ಆದೇಶಿಸಿತ್ತು.

ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಎಜಿಆರ್ ಬಾಕಿ ಮೊತ್ತ ₹ 93,520 ಕೋಟಿ ಪಾವತಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.