ನವದೆಹಲಿ: ಫ್ಯಾಕ್ಟ್ ಚೆಕಿಂಗ್ ವೆಬ್ಸೈಟ್ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲ 6 ಎಫ್ಐಆರ್ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

'ಅವರನ್ನು ನಿರಂತರ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಯಾವುದೇ ಸಮರ್ಥನೆ ಇಲ್ಲ' ಎಂದು ನ್ಯಾಯಾಲಯ ಹೇಳಿದೆ.

ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ, ದೆಹಲಿಗೆ ವರ್ಗಾಯಿಸುವಂತೆ ಆದೇಶಿಸಿರುವ ನ್ಯಾಯಾಲಯವು, ಈ ಕುರಿತಂತೆ ಏಕೀಕೃತ ತನಿಖೆ ನಡೆಯಬೇಕೆಂದು ಹೇಳಿದೆ.

‘ಒಂದು ಪ್ರಕರಣದಲ್ಲಿ ಜಾಮೀನು ಪಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜುಬೈರ್ ಅವರನ್ನು ಬಂಧಿಸಲಾಗುತ್ತಿದೆ. ಎಲ್ಲ ಎಫ್ಐಆರ್ಗಳು ಒಂದೇ ಗುರಿಯನ್ನು ಹೊಂದಿರುವಂತೆ ತೋರುತ್ತದೆ. ಇದೊಂದು ವಿಷವರ್ತುಲದಂತೆ ಗೋಚರಿಸುತ್ತಿದೆ’ಎಂದು ಕಳೆದ ಬಾರಿಯ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.