ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರ ದಾಳಿ ನಡೆದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ತಡೆಗಟ್ಟುವುದರ ಬಗ್ಗೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ಉತ್ತರಾಖಂಡ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ, ಚತ್ತೀಸಗಢ, ಪಶ್ಚಿಮ ಬಂಗಾಳ , ದೆಹಲಿ ಮತ್ತು ರಾಷ್ಟ್ರ ರಾಜಧಾನಿ ವಲಯ (ಎನ್ಸಿಆರ್)ಗಳಿಗೆ ಸುಪ್ರೀಂ ನೋಟಿಸ್ ನೀಡಿದೆ.
ಈ ರಾಜ್ಯದ ಸರ್ಕಾರಗಳು ತಮ್ಮ ರಾಜ್ಯದಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಭದ್ರತೆ ನೀಡುವ ಬಗ್ಗೆ ಮುತುವರ್ಜಿ ವಹಿಸಬೇಕು ಮತ್ತು ವಿದ್ಯಾರ್ಥಿಗಳ ರಕ್ಷಣೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಖಾತರಿ ಪಡಿಸಿಕೊಳ್ಳಬೇಕೆಂದು ನ್ಯಾಯಾಲಯ ಹೇಳಿದೆ.

ಪುಲ್ವಾಮ ದಾಳಿ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ದೇಶ ವಿರೋಧಿ ಚಟುವಟಿಕೆಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದು ಕೆಲವು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ವಜಾ ಮಾಡಲಾಗಿತ್ತು. ಕೆಲವರನ್ನು ಬಂಧಿಸಲಾಗಿತ್ತು.ಇನ್ನು ಕೆಲವೆಡೆ ಹಾಸ್ಟೆಲ್, ಮನೆಗಳಲ್ಲಿ ವಾಸವಿದ್ದ ವಿದ್ಯಾರ್ಥಿಗಳನ್ನು ಮನೆ ಮಾಲೀಕರು ಖಾಲಿ ಮಾಡಿಸಿದ ಘಟನೆಗಳು ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.