ನವದೆಹಲಿ:ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪತ್ರಕರ್ತ ತರುಣ್ ತೇಜ್ಪಾಲ್ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯಿಂದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಶುಕ್ರವಾರ ಹಿಂದೆ ಸರಿದಿದ್ದಾರೆ.

‘2016 ರಲ್ಲಿ ಕೆಲವು ಹಂತದಲ್ಲಿ ನಾನು ಪ್ರಕರಣಕ್ಕೆ ಸಂಬಂಧಿಸಿ ಗೋವಾ ರಾಜ್ಯದ ಪರವಾಗಿ ಹಾಜರಾಗಿದ್ದರಿಂದ ವಿಚಾರಣೆಯಿಂದ ಈಗ ಹಿಂದೆ ಸರಿಯುತ್ತಿದ್ದೇನೆ. ಮುಂದಿನ ವಾರ ಬೇರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಿ ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರೊಂದಿಗಿನ ಪೀಠದಲ್ಲಿ ನ್ಯಾಯಮೂರ್ತಿ ರಾವ್ ಹೇಳಿದರು.

ಅತ್ಯಾಚಾರ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿರುವುದರ ಬಗ್ಗೆ ಮರುತನಿಖೆ ನಡೆಸುವಂತೆ ಕೋರಿ ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗೋಪ್ಯವಾಗಿ ನಡೆಸುವಂತೆ ತರುಣ್ ತೇಜ್ಪಾಲ್ ಬಾಂಬೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು.

2013ರಲ್ಲಿ ಗೋವಾದ ಐಷಾರಾಮಿ ಹೋಟೆಲಿನ ಲಿಫ್ಟ್ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ತರುಣ್ ತೇಜ್ಪಾಲ್ ಎದುರಿಸುತ್ತಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಗೋವಾದ ಸೆಷನ್ಸ್ ನ್ಯಾಯಾಲಯ ಎಲ್ಲ ಲೈಂಗಿಕ ದೌರ್ಜನ್ಯ ಆರೋಪಗಳಿಂದ ತರುಣ್ ತೇಜ್ಪಾಲ್ ಅವರನ್ನು ಮುಕ್ತಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.