ನವದೆಹಲಿ: ಸುಪ್ರೀಂ ಕೋರ್ಟ್ನ ನೂತನ ನ್ಯಾಯಮೂರ್ತಿಗಳಾಗಿ ನಾಲ್ವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸುಪ್ರೀಂ ಕೋರ್ಟ್ನ ನಾಯಮೂರ್ತಿಗಳ ಸಂಖ್ಯೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 34ಕ್ಕೆ ಏರಿತು.

ಸುಪ್ರೀಂ ಕೊರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ಸಮ್ಮುಖದಲ್ಲಿ ಇಂದು ಬೆಳಿಗ್ಗೆ ನ್ಯಾಯಮೂರ್ತಿಗಳಾದ ವಿ.ರಾಮಸುಬ್ರಮಣಿಯನ್, ಕೃಷ್ಣ ಮುರಾರಿ, ಎಸ್.ರವೀಂದ್ರ ಭಟ್ ಮತ್ತು ಹೃಷಿಕೇಶ್ ರಾಯ್ ಅವರು ಪ್ರಮಾಣ ವಚನ ಸ್ವೀಕರಿಸಿದರು ಎಂದು ಬಾರ್ ಅಂಡ್ ಬೆಂಚ್ ವೆಬ್ ವರದಿ ಮಾಡಿದೆ.

ಕೃಷ್ಣ ಮುರಾರಿ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಎಸ್.ರವೀಂದ್ರ ಭಟ್ ಅವರು ರಾಜಸ್ಥಾನ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ವಿ.ಸುಬ್ರಮಣಿಯನ್ ಅವರು ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಹೃಷಿಕೇಶ್ ರಾಯ್ ಅವರು ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಈ ನಾಲ್ವರನ್ನು ಸುಪ್ರೀಂ ಕೋರ್ಟ್ನಲ್ಲಿ ಖಾಲಿ ಉಳಿದಿದ್ದ ನಾಲ್ಕು ನ್ಯಾಯಮೂರ್ತಿಗಳ ಸ್ಥಾನಕ್ಕೆ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಆಗಸ್ಟ್ 28ರಂದು ಶಿಫಾರಸು ಮಾಡಿತ್ತು.

ಇದೇ ವೇಳೆ ವಿವಿಧ ರಾಜ್ಯಗಳ ಎಂಟು ಹೈಕೋರ್ಟ್ಗಳಿಗೂ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿತ್ತು. ಈ ಮೂಲಕ ಎಲ್ಲಾ ಸ್ಥಾನಗಳೂ ಭರ್ತಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.