ನವದೆಹಲಿ: ಸುಪ್ರೀಂ ಕೋರ್ಟ್ನ ಹಲವು ಸಿಬ್ಬಂದಿಗೆ ಕೋವಿಡ್–19 ದೃಢಪಟ್ಟಿರುವ ಬೆನ್ನಲ್ಲೇ ಪ್ರಕರಣಗಳ ಭೌತಿಕ ವಿಚಾರಣೆಯನ್ನು ಕೋರ್ಟ್ ಸ್ಥಗಿತಗೊಳಿಸಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧರಿಸಿದೆ.

ನ್ಯಾಯಮೂರ್ತಿಗಳು ಅವರ ನಿವಾಸದಿಂದಲೇ ವಿಚಾರಣೆ ನಡೆಸಲಿದ್ದು, ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಪ್ರಕರಣಗಳ ವಿಚಾರಣೆ ಆರಂಭವಾಗಲಿದೆ. 10:30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠವು 11:30ಕ್ಕೆ ಕಾರ್ಯಾರಂಭಿಸಲಿದೆ, 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಕೋರ್ಟ್ ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಕೋರ್ಟ್ ಆವರಣದಲ್ಲಿ ಸೋಂಕು ನಿವಾರಕ ಸಿಂಪಡಿಸುವ ಕಾರ್ಯವನ್ನು ಇಂದು ನಡೆಸಲಾಗುತ್ತಿದೆ. ಶನಿವಾರ ಕೋರ್ಟ್ನ 44 ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿತ್ತು.

ದೇಶದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್ ದೃಢಪಟ್ಟ1,68,912 ಹೊಸ ಪ್ರಕರಣಗಳು ದಾಖಲಾಗಿವೆ, ಸೋಂಕಿನಿಂದ 904 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.