ನವದೆಹಲಿ: ಲಘು ಮೋಟಾರು ವಾಹನದ ಚಾಲನಾ ಪರವಾನಗಿ (ಎಲ್ಎಂವಿ) ಹೊಂದಿರುವವರಿಗೆ 7,500 ಕೆ.ಜಿವರೆಗಿನ ತೂಕ ಹೊಂದಿರುವ ಸಾರಿಗೆ ವಾಹನಗಳನ್ನು ಓಡಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಎಲ್ಎಂವಿ ಚಾಲನಾ ಪರವಾನಗಿ ಹೊಂದಿರುವವರು ಜವಾಬ್ದಾರರು ಎಂಬುದಕ್ಕೆ ಯಾವುದೇ ಪ್ರಾಯೋಗಿಕ ಡೇಟಾ ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಲಘು ಮೋಟಾರು ವಾಹನದ ಚಾಲನಾ ಪರವಾನಗಿ (ಎಲ್ಎಂವಿ) ಹೊಂದಿರುವವರ ಜೀವನೋಪಾಯಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸೇರಿದಂತೆ 4 ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು.

ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ನಿರ್ದಿಷ್ಟ ತೂಕದ ಸಾರಿಗೆ ವಾಹನವನ್ನು ಕಾನೂನುಬದ್ಧವಾಗಿ ಚಲಾಯಿಸುವುದಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಏನಾದರೂ ಬದಲಾವಣೆ ತರುವ ಅಗತ್ಯವಿದೆಯೇ ಎಂದು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರವನ್ನು ಕೇಳಿತ್ತು.

ಇದು ನೀತಿ ನಿರೂಪಣೆಗೆ ಸಂಬಂಧಿಸಿದ ವಿಷಯವಾಗಿದ್ದು, ಲಕ್ಷಾಂತರ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸರ್ಕಾರ ಈ ವಿಷಯವನ್ನು ಹೊಸದಾಗಿ ನೋಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.