ನವದೆಹಲಿ: ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಅವರ ಕುಟುಂಬದ 7 ಸದಸ್ಯರನ್ನು ಹತ್ಯೆ ಮಾಡಿದ್ದ ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ.

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ನಡೆಸಿತು. ಗುಜರಾತ್ ಸರ್ಕಾರವು ಶಿಕ್ಷೆ ರದ್ದು ಆದೇಶ ಹೊರಡಿಸಿರುವುದು ಸೂಕ್ತವಲ್ಲ ಎಂದು ಪೀಠ ಹೇಳಿದೆ.

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪಲಾಯನ ಮಾಡುತ್ತಿದ್ದ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನು, ಐದು ತಿಂಗಳ ಗರ್ಭಿಣಿಯೂ ಆಗಿದ್ದರು. ಅವರ ಮೂರು ವರ್ಷದ ಮಗಳೂ ಸೇರಿದಂತೆ 7 ಮಂದಿಯನ್ನ ಹತ್ಯೆ ಮಾಡಲಾಗಿತ್ತು.

ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.
.Bilkis Bano Case:2 ವಾರದಲ್ಲಿ ಜೈಲಿಗೆ ಹಿಂದಿರುಗಲು ಅಪರಾಧಿಗಳಿಗೆ ಕೋರ್ಟ್ ಸೂಚನೆ.ಸಂಪಾದಕೀಯ | ಬಿಲ್ಕಿಸ್ ಬಾನು ಪ್ರಕರಣ; ಅಪರಾಧಿಗಳ ಬಿಡುಗಡೆ ಹೀನ ಕೃತ್ಯ.Bilkis Bano Case: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಅರ್ಜಿ ವಿಚಾರಣೆ 9ರಿಂದ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.