ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಎಂಬುವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಹತ್ಯೆಗೈದಿದ್ದ 11 ಮಂದಿ ಅಪರಾಧಿಗಳು ಮುಂದಿನ 2 ವಾರದೊಳಗೆ ಜೈಲಿಗೆ ಹಿಂದಿರುಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ 11 ಮಂದಿ ಅಪರಾಧಿಗಳ ಶಿಕ್ಷೆಗೆ ವಿನಾಯಿತಿ ನೀಡಿ ಗುಜರಾತ್ ಸರ್ಕಾರ ಆದೇಶ ಹೊರಡಿಸಿತ್ತು. ಈ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಇಂದು (ಸೋಮವಾರ) ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ನಡೆಸಿತು. ಗುಜರಾತ್ ಸರ್ಕಾರವು ಶಿಕ್ಷೆ ರದ್ದು ಆದೇಶ ಹೊರಡಿಸಿರುವುದು ಸೂಕ್ತವಲ್ಲ ಎಂದು ನ್ಯಾಯಪೀಠ ಚಾಟಿ ಬೀಸಿದೆ.

ಅಪರಾಧಿಗಳ ಕೃತ್ಯವು ಘೋರ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು, ‘ಈ ಪ್ರಕರಣದಲ್ಲಿ ನಾವು ಭಾವನೆಗಳ ಆಧಾರದಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ. ಎಲ್ಲವನ್ನೂ ಕಾನೂನಿನ ಅಡಿಯಲ್ಲೇ ತೀರ್ಮಾನಿಸಿದ್ದೇವೆ’ ಎಂದು ಹೇಳಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರು ನಿವೃತ್ತರಾಗುವವರೆಗೆ ಅವರ ನೇತೃತ್ವದ ನ್ಯಾಯಪೀಠವು ಈ ಪ್ರಕರಣದ ವಿಚಾರಣೆಯನ್ನು ನಡೆಸಿತ್ತು.

ಗುಜರಾತ್ ಸರ್ಕಾರದ ಆದೇಶದಂತೆ ಸದ್ಯ ಬಿಡುಗಡೆಯಾಗಿರುವ ಅಪರಾಧಿಗಳು ಸುಪ್ರೀಂ ಕೋರ್ಟ್ ಆದೇಶದಂತೆ ಮುಂದಿನ ಎರಡು ವಾರದೊಳಗಾಗಿ ಜೈಲಿಗೆ ಮರಳಬೇಕಿದೆ.

ಬಿಲ್ಕಿಸ್ ಬಾನು ಅವರಲ್ಲದೆ ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್, ಲಖನೌ ವಿಶ್ವವಿದ್ಯಾಲಯದ ಮಾಜಿ ಕುಲಪತಿ ರೂಪ್ ರೇಖಾ ವರ್ಮಾ, ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಸಾಮೂಹಿಕ ಅತ್ಯಾಚಾರ ನಡೆದಾಗ ಬಿಲ್ಕಿಸ್ ಬಾನು ಅವರಿಗೆ 21 ವರ್ಷ ವಯಸ್ಸು. ಐದು ತಿಂಗಳ ಗರ್ಭಿಣಿಯಾಗಿದ್ದರು. ಗೋಧ್ರಾ ರೈಲಿಗೆ ಬೆಂಕಿ ಕೃತ್ಯದ ಹಿಂದೆಯೇ ಹಿಂಸಾಚಾರ ಸಂಭವಿಸಿತ್ತು.
.Bilkis Bano Case: ಅಪರಾಧಿಗಳ ಬಿಡುಗಡೆ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್.ಸಂಪಾದಕೀಯ | ಬಿಲ್ಕಿಸ್ ಬಾನು ಪ್ರಕರಣ; ಅಪರಾಧಿಗಳ ಬಿಡುಗಡೆ ಹೀನ ಕೃತ್ಯ.ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: ಕಡತ ಕೋರ್ಟ್ಗೆ ನೀಡಲು ಗುಜರಾತ್ ಹಿಂದೇಟು.ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.