ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸೊರೇನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂ.ಎಂ.ಸುಂದರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಸೊರೇನ್ ಪರ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ, ಹೈಕೋರ್ಟ್ನಲ್ಲಿ ಮನವಿ ಸಲ್ಲಿಸುವಂತೆ ಪೀಠ ಸೂಚಿಸಿತು.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ನಾಯಕ ಹೇಮಂತ್ ಸೊರೇನ್ ಅವರು ಬುಧವಾರ (ಜನವರಿ 31ರಂದು) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

ಲೋಕಸಭೆಗೆ ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ತಮ್ಮನ್ನು ಬಂಧಿಸಿರುವುದು 'ಯೋಜಿತ ಪಿತೂರಿ'ಯಾಗಿದೆ ಎಂದು ಸೊರೇನ್, ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದ್ದರು. ಜೊತೆಗೆ, ತಮ್ಮ ಬಂಧನವು ಅನಧಿಕೃತ ಮತ್ತು ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದೂ ಘೋಷಿಸುವಂತೆಯೂ ಕೋರಿದ್ದರು.

ರಾಂಚಿಯಲ್ಲಿರುವ ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ವಿಶೇಷ ನ್ಯಾಯಾಲಯವು ಸೊರೇನ್ ಅವರನ್ನು ಗುರುವಾರ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
.₹600 ಕೋಟಿ ಭೂಹಗರಣದ ಆರೋಪ |ಹೇಮಂತ್ ಸೊರೇನ್ ಸೆರೆ: ಚಂಪೈ ಜಾರ್ಖಂಡ್ನ ಹೊಸ ಸಿಎಂ.ಜಾರ್ಖಂಡ್ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಪ್ರಮಾಣ: ಇದೇ 5ರಂದು ವಿಶ್ವಾಸ ಮತಯಾಚನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.