ನವದೆಹಲಿ: ಬಿಎಸ್ಪಿಯ ಆರು ಶಾಸಕರು ರಾಜಸ್ಥಾನದಲ್ಲಿ ಕಾಂಗ್ರೆಸ್ ಜೊತೆ ವಿಲೀನಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ವಿಚಾರದಲ್ಲಿ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಗುರುವಾರ ತಿಳಿಸಿದೆ.

‘ಈ ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ’ ಎಂದು ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮೂರ್ತಿ ಅವರಿದ್ದ ನ್ಯಾಯಪೀಠವು ತಿಳಿಸಿತು.

ಶಾಸಕರ ವಿಲೀನಕ್ಕೆ 2019 ಸೆ.18ರಂದು ಅನುಮತಿ ನೀಡಿದ್ದ ವಿಧಾನಸಭೆ ಅಧ್ಯಕ್ಷರ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸಭಾಧ್ಯಕ್ಷ ಸಿ.ಪಿ.ಜೋಶಿ ಅವರ ಆದೇಶಕ್ಕೆ ತಡೆ ನೀಡಬೇಕು ಎಂದು ದಿಲಾವರ್ ಕೋರಿದ್ದರು. ವಿಚಾರಣೆಯನ್ನು ಪೀಠ ಸೋಮವಾರಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.