ನವದೆಹಲಿ: ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಿಗದಿಯಾಗಿರುವ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

2016ರಲ್ಲಿ ಧಾರವಾಡದಲ್ಲಿ ಯೋಗೇಶ್ ಅವರನ್ನು ಹತ್ಯೆ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇದ್ದ ರಜಾಕಾಲದ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ನಿರಾಕರಿಸಿತು.

ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಮಾಡಿರುವುದರಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ಏಪ್ರಿಲ್ 8ರಂದು ನಿರಾಕರಿಸಿತ್ತು. ವಿಚಾರಣೆಯನ್ನು ಪೂರ್ಣಗೊಳಿಸಿ, ಕ್ರಿಮಿನಲ್ ಪ್ರಕರಣವನ್ನು ಸಾಧ್ಯವಾದಷ್ಟುಮಟ್ಟಿಗೆ ಮೂರು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.