ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳಿಂದಾಗಿ ಇಡೀ ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯಾಗಿದೆ ಎಂಬುದನ್ನು ಲಭ್ಯವಿರುವ ದಾಖಲೆಗಳು ಸಾಬೀತುಪಡಿಸುವುದಿಲ್ಲ. ಈ ಕಾರಣಕ್ಕೆ, 2024ನೇ ಸಾಲಿನ ನೀಟ್–ಯುಜಿ ಪರೀಕ್ಷೆ ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು, ದೇಶದಾದ್ಯಂತ ವೈದ್ಯಕೀಯ ಕಾಲೇಜುಗಳಲ್ಲಿನ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ಮೇ 5ರಂದು ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆ ವ್ಯವಸ್ಥಿತವಾಗಿ ಸೋರಿಕೆಯಾಗಿರುವುದನ್ನು ಸದ್ಯ ಲಭ್ಯವಿರುವ ದಾಖಲೆಯಲ್ಲಿರುವ ಮಾಹಿತಿಯು ಸೂಚಿಸುವುದಿಲ್ಲ ಎಂದು ಹೇಳಿದೆ.

‘ಪ್ರಶ್ನೆ ಪತ್ರಿಕೆಗಳ ಸೋರಿಕೆ ಇಡೀ ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಮೇಲೆ ಪರಿಣಾಮ ಬೀರಿದೆ ಎಂಬುದನ್ನು ಸಾಬೀತುಪಡಿಸುವ ಅಂಶಗಳು ಲಭ್ಯವಾಗಿಲ್ಲ. ಹೀಗಾಗಿ ನ್ಯಾಯದಾನದ ಮೂಲತತ್ವಗಳಿಗೆ ಅನುಗುಣವಾಗಿ ಇಡೀ ಪರೀಕ್ಷೆಯನ್ನೇ ರದ್ದುಗೊಳಿಸುವುದು ಸಮರ್ಥನೀಯವಲ್ಲ’ ಎಂದು ಪೀಠ ಪ್ರತಿಪಾದಿಸಿದೆ.

ಪಟ್ನಾ ಮತ್ತು ಹಜರಿಬಾಗ್ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಈ ಘಟನೆಯಲ್ಲಿ ಪಟ್ನಾ ಮತ್ತು ಹಜರಿಬಾಗ್ನ 155 ವಿದ್ಯಾರ್ಥಿಗಳಿಗೆ ಮಾತ್ರವೇ ಲಾಭವಾಗಿದೆ ಎಂದು ಸಿಬಿಐ ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ ವರ್ಷದಲ್ಲಿ ಹೊಸದಾಗಿ ನೀಟ್–ಯುಜಿ ಪರೀಕ್ಷೆ ನಡೆಸಲು ನಿರ್ದೇಶಿಸಿದರೆ, ಈಗಾಗಲೇ ಪರೀಕ್ಷೆ ಬರೆದ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ವೈದ್ಯಕೀಯ ಕಾಲೇಜು ಪ್ರವೇಶಾತಿ, ವೈದ್ಯಕೀಯ ಶಿಕ್ಷಣ, ಭವಿಷ್ಯದಲ್ಲಿ ಅರ್ಹತೆ ಹೊಂದಿದ ವೈದ್ಯಕೀಯ ವೃತ್ತಿಪರರ ಲಭ್ಯತೆ ಸೇರಿ ಇನ್ನಿತರ ಅಂಶಗಳ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಪೀಠವು ಅಭಿಪ್ರಾಯಪಟ್ಟಿತು.

ನೀಟ್–ಯುಜಿ ಪರೀಕ್ಷೆ ಬರೆದ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ತೀರ್ಪಿನ ಆಯ್ದಭಾಗ ಪ್ರಕಟಿಸಿದ ಪೀಠವು, ತೀರ್ಪಿನ ವಿಸ್ತೃತ ಅಂಶಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಹಿರಿಯ ವಕೀಲರಾದ ನರೇಂದ್ರ ಹೂಡಾ, ಸಂಜಯ್ ಹೆಗ್ಡೆ ಮತ್ತು ವಕೀಲ ಮ್ಯಾಥ್ಯು ಜೆ. ನೆಡುಂಪಾರ ಹಾಗೂ ಇತರ ವಕೀಲರು ಅರ್ಜಿದಾರರ ಪರ ವಾದಿಸಿದರು.

ಫಲಿತಾಂಶ ಪರಿಷ್ಕರಿಸಲು ನಿರ್ದೇಶನ

ಹಿಂದಿನ ದಿನ ಸುಪ್ರೀಂ ಕೋರ್ಟ್ನ ಆದೇಶಕ್ಕೆ ಅನುಸಾರವಾಗಿ ಐಐಟಿ ದೆಹಲಿ ನಿರ್ದೇಶಕರು 2024ರ ನೀಟ್-ಯುಜಿ ಪರೀಕ್ಷೆಯಲ್ಲಿ ಭೌತವಿಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗೆ ಆಯ್ಕೆ ನಾಲ್ಕು ಸರಿಯಾದ ಉತ್ತರ ಎಂದು ಹೇಳುವ ವರದಿಯನ್ನು ಸಲ್ಲಿಸಿದ್ದಾರೆ. ಪ್ರಶ್ನೆಯಲ್ಲಿನ ಅಸ್ಪಷ್ಟತೆಯಿಂದಾಗಿ ಎರಡು ಉತ್ತರಗಳನ್ನು ಸರಿ ಎಂದು ಪರಿಗಣಿಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ನಿರ್ಧಾರವನ್ನು ನ್ಯಾಯಾಲಯ ತಿರಸ್ಕರಿಸಿತು. ಐಐಟಿ ದೆಹಲಿಯ ತಜ್ಞರ ಸಮಿತಿಯ ವರದಿಯ ಪ್ರಕಾರ ಫಲಿತಾಂಶಗಳನ್ನು ಮರು ಲೆಕ್ಕಾಚಾರ ಮಾಡಲು ಎನ್ಟಿಎಗೆ ನಿರ್ದೇಶನ ನೀಡಿದೆ. ಇದಕ್ಕೂ ಮೊದಲು ಕೇಂದ್ರ ಶಿಕ್ಷಣ ಸಚಿವಾಲಯವು ನೀಟ್–ಯುಜಿ 2024ರ ಐಐಟಿ ಮದ್ರಾಸ್ ನಡೆಸಿದ ದತ್ತಾಂಶದ ತಾಂತ್ರಿಕ ವಿಶ್ಲೇಷಣೆಯಲ್ಲಿ ಸಾಮೂಹಿಕ ಅಕ್ರಮ ನಡೆಸಿರುವ ಯಾವುದೇ ಸೂಚನೆ ಕಂಡುಬಂದಿಲ್ಲ ಅಥವಾ ಅಸಹಜವಾಗಿ ನೀಡಿದ ಅಂಕಗಳಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಲಾಭವಾಗಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.