ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನಾ ಅವರನ್ನು ದೆಹಲಿ ಪೊಲೀಸ್ ಆಯುಕ್ತರಾಗಿ ಕೇಂದ್ರ ಸರ್ಕಾರ ನೇಮಕಾತಿ ಮಾಡಿದ್ದನ್ನು ಎತ್ತಿ ಹಿಡಿದಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಎನ್‌ಜಿಒ ಸಲ್ಲಿಸಿದ ಅರ್ಜಿಯನ್ನು ಆಲಿಸಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.

ಸಾರ್ವಜನಿಕ ಹಿತಾಸಕ್ತಿಗಳ ಮೊಕದ್ದಮೆ ಕೇಂದ್ರವಾದ ಎನ್‌ಜಿಒ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಆಸ್ತಾನಾ ಅವರಿಗೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠ ನೋಟಿಸ್ ನೀಡಿದೆ.

ಜುಲೈ 31 ರಂದು ಆಸ್ತಾನಾ ಅವರ ನಿವೃತ್ತಿಗೂ ನಾಲ್ಕು ದಿನಗಳ ಮೊದಲು ಅವರನ್ನು ದೆಹಲಿ ಪೊಲೀಸ್ ಆಯುಕ್ತರಾಗಿ ನೇಮಕಾತಿ ಮಾಡಿದ್ದನ್ನು ಪ್ರಶ್ನಿಸಿ ಎನ್‌ಜಿಒ ರಿಟ್ ಅರ್ಜಿ ಮತ್ತು ಮೇಲ್ಮನವಿ ಸಲ್ಲಿಸಿತ್ತು.

ನವೆಂಬರ್ 18 ರಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದಂತೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಎನ್‌ಜಿಒ ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.

ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ರಾಕೇಶ್ ಆಸ್ತಾನಾ ಪರ ವಕೀಲ ಮುಕುಲ್ ರೋಹಟಗಿ ಹಾಜರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.