ನವದೆಹಲಿ: ಕಿರಿಯ ಕುಸ್ತಿಪಟುಗಳಲ್ಲಿ ತನ್ನ ಪ್ರಾಬಲ್ಯವನ್ನು ಪುನಃ ಸ್ಥಾಪಿಸಲು ಬಯಸಿದ್ದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್, ನಡೆಸಿದ ಪಿತೂರಿಯಿಂದಾಗಿ ಯುವ ಕುಸ್ತಿಪಟುವಿನ ಕೊಲೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಛತ್ರಸಾಲ್ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿ ಪಟು ಸಾಗರ್ ಧನಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದು, ಅದರಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ.

ಚಾರ್ಜ್ಶೀಟ್ನಲ್ಲಿ ಸುಶೀಲ್ ಕುಮಾರ್ ಸೇರಿದಂತೆ 13 ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಸುಶೀಲ್ ಕುಮಾರ್ ಪಿತೂರಿ ನಡೆಸಿದ್ದರು ಎಂಬುದಕ್ಕೆ ಸಾಕಷ್ಟು ಸಾಕ್ಷ್ಯ, ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳದ ವೇಳೆ ಗಾಯಗೊಂಡ ನಾಲ್ವರು ಸೇರಿದಂತೆ 155 ಸಾಕ್ಷಿಗಳ ಹೆಸರನ್ನು ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.