ಕೋಲ್ಕತ್ತ: ಜಮಾತ್–ಉಲ್–ಮುಜಾಹಿದೀನ್ಬಾಂಗ್ಲಾದೇಶ (ಜೆಎಂಬಿ) ಸಂಘಟನೆಯ ಶಂಕಿತ ಉಗ್ರನನ್ನು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

‘ಜಿಲ್ಲೆಯ ಸುಭಾಷ್ಗ್ರಾಮದಲ್ಲಿ ಎನ್ಐಎ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಿದರು. ಬಂಧಿತನಿಂದ ನಕಲಿ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಬಂಧಿತನ ವಿಚಾರಣೆ ನಡೆಯುತ್ತಿದೆ. ಯಾವಾಗ ಮತ್ತು ಹೇಗೆ ಆತ ಭಾರತ ಗಡಿ ಪ್ರವೇಶಿಸಿದ ಎಂಬುದನ್ನು ತಿಳಿದುಕೊಳ್ಳಲಾಗುತ್ತಿದೆ. ಉಗ್ರ ಸಂಘಟನೆಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.