ನವದೆಹಲಿ: ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದ, ಲೋಕಸಭೆಯ ಸದಸ್ಯೆ ಪರನೀತ್ ಕೌರ್ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಕೌರ್ ಪಂಜಾಬ್‌ನ ಪಟಿಯಾಲದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದರು.

ಇವರು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಪತ್ನಿ. ಅಮರೀಂದರ್ ಸಿಂಗ್ ಅವರು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆ ಬೆಳವಣಿಗೆಯ ನಂತರ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಕಾಂಗ್ರೆಸ್ ಪಕ್ಷವು ಪರನೀತ್ ಕೌರ್ ಅವರನ್ನು ಅಮಾನತುಪಡಿಸಿತ್ತು.

ಪಕ್ಷ ಸೇರ್ಪಡೆ ಬಳಿಕ ಬಿಜೆಪಿ ಮುಖಂಡರ ಜೊತೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರನೀತ್ ಕೌರ್ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ಉತ್ತಮ ಸಾಧನೆಯಾಗಿದೆ ಎಂದು ಶ್ಲಾಘಿಸಿದರು.

‘ಮೋದಿ ಅವರ ನೇತೃತ್ವ ಹಾಗೂ ನೀತಿಗಳಿಂದಾಗಿ ದೇಶ ಹಾಗೂ ನಮ್ಮ ಮಕ್ಕಳ ಭವಿಷ್ಯ ಸುಭದ್ರವಾಗಿದೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.