ನವದೆಹಲಿ: 11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶವನ್ನು ಬುಧವಾರ(ಜ.31)ದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದ ಮುನ್ನಾದಿನವಾದ ಇಂದು ಹಿಂಪಡೆಯಲಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲ ಸಂಸದರ ಅಮಾನತು ಹಿಂಪಡೆಯುವಂತೆ ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಕಳೆದ ತಿಂಗಳು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ರಾಜ್ಯಸಭೆ ಹಾಗೂ ಲೋಕಸಭೆ ಸೇರಿದಂತೆ 146 ಸಂಸದರನ್ನು ಅಮಾನತುಗೊಳಿಸಲಾಗಿತ್ತು.
.ಸಂಸದರ ಅಮಾನತು | ಬಿಜೆಪಿಯಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ: ಕಾಂಗ್ರೆಸ್ ಆರೋಪ.
146 ಸದಸ್ಯರ ಪೈಕಿ 132 ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿತ್ತು. ಉಳಿದ 14 ಸಂಸದರನ್ನು (ರಾಜ್ಯಸಭೆಯ 11 ಮತ್ತು ಲೋಕಸಭೆಯ ಮೂವರು) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತುಗೊಳಿಸಲಾಗಿತ್ತು.

ಲೋಕಸಭೆಯ ವಿಶೇಷಾಧಿಕಾರ ಸಮಿತಿಯು ಜನವರಿ 12ರಂದು 3 ಲೋಕಸಭಾ ಸಂಸದರ ಅಮಾನತು ರದ್ದುಗೊಳಿಸಿತ್ತು. ಇಂದು 11 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲಾಗಿದೆ.
.ಸಂಸದರ ಅಮಾನತು: ಖರ್ಗೆ– ಧನಕರ್ ‘ಪತ್ರ ಸಮರ’ ತೀವ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.