ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ನೌಗಮ್ ಪ್ರದೇಶದಲ್ಲಿ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪಂಥಚೌಕ್-ಪರಿಂಪೋರಾ ಬೈಪಾಸ್‌ನಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಶ್ರೀನಗರ–ಬಾರಾಮುಲ್ಲಾ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಟಿನ್ ಕ್ಯಾನ್‌ವೊಂದು ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಇದರೊಳಗೆ ಐಇಡಿ ಇರಬಹುದು ಎಂದು ಶಂಕಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

‘ಈ ಹಿನ್ನೆಲೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಬೇಕಾಯಿತು. ಬಾಂಬ್ ನಿಷ್ಕ್ರಿಯ ದಳಕ್ಕೆ ಬಗ್ಗೆ ಮಾಹಿತಿ ನೀಡಲಾಗಿದೆ. ಅವರು ಪರಿಶೀಲನೆ ನಡೆಸಿದ ಬಳಿಕವೇ ಇದರಲ್ಲಿ ಸ್ಫೋಟಕ ವಸ್ತುವಿದೆಯೇ ಎಂಬುದು ತಿಳಿದುಬರಲಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.