ಕೋಲ್ಕತ್ತ: ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಇತರ ರಾಜ್ಯಗಳ ಪೊಲೀಸ್ ಪಡೆಗಳನ್ನು ನಿಯೋಜಿಸಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಸುವೆಂದು ಅಧಿಕಾರಿ ಒತ್ತಾಯಿಸಿದ್ದಾರೆ. ಸ್ಥಳೀಯ ಕಾನೂನು ಪರಿಪಾಲಕರು ವಿರೋಧ ಪಕ್ಷಗಳ ವಿರುದ್ಧ ಪಕ್ಷಪಾತದ ಕೆಲಸಗಳನ್ನು ಮಾಡಬಹುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಚಾರದ ವೇಳೆ ಬಿಜೆಪಿ ಸೇರಿದಂತೆ ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ಮಾಡುವುದನ್ನು ತಡೆಯುವಲ್ಲಿ ರಾಜ್ಯ ಪೊಲೀಸರು ಅಸಮರ್ಥರಾಗಿದ್ದಾರೆ ಎಂಬುದನ್ನು ರಾಜ್ಯದಲ್ಲಿ ನಡೆದ ಇತ್ತೀಚಿನ ಘಟನೆಗಳು ತೋರಿಸಿವೆ’ ಎಂದು ತಿಳಿಸಿದ್ದಾರೆ.

‘ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಇತರ ರಾಜ್ಯಗಳ ಪೊಲೀಸ್ ಪಡೆಗಳನ್ನು ತಕ್ಷಣವೇ ನಿಯೋಜಿಸುವ ಪರಿಸ್ಥಿತಿ ಇದೆ. ನಮಗೆ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.