ಹಾಲ್ದಿಯಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ಸುವೇಂದು ಅಧಿಕಾರಿ ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಸಿದರು.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಸ್ಮೃತಿ ಇರಾನಿ ಅವರೊಂದಿಗೆ ಬೃಹತ್ ರೋಡ್ಶೋನಲ್ಲಿ ಪಾಲ್ಗೊಂಡ ಸುವೇಂದು ಅಧಿಕಾರಿ, ನಂತರ ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕಳೆದ ಡಿಸೆಂಬರ್ನ್ಲ್ಲಿ ಟಿಎಂಸಿ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದ ಸುವೇಂದು, ತವರು ಕ್ಷೇತ್ರ ನಂದಿಗ್ರಾಮದಲ್ಲಿ ತನ್ನೆದುರು ಸ್ಪರ್ಧಿಸಿ ಗೆಲ್ಲುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸವಾಲು ಹಾಕಿದ್ದರು. ಸವಾಲನ್ನು ಸ್ವೀಕರಿಸಿದ್ದ ಮಮತಾ ಅವರು ಬುಧವಾರ ಇದೇ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

2016ರ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಟಿಎಂಸಿ ಪಕ್ಷದಿಂದ ಆಯ್ಕೆಯಾಗಿದ್ದರು. ಆಗ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿಪಿಐ ಅಭ್ಯರ್ಥಿ ವಿರುದ್ಧ 81,230 ಮತಗಳ ಅಂತರದಿಂದ ಜಯಗಳಿಸಿದ್ದರು. ಆಗ ಶೇ 67ರಷ್ಟು ಮತಗಳನ್ನು ಪಡೆದಿದ್ದರು. ಎಡ ಪಕ್ಷಗಳ ಮೈತ್ರಿಕೂಟ ಇಲ್ಲಿ ಸಿಪಿಎಂ ಯುವ ನಾಯಕರಾದ ಮೀನಾಕ್ಷಿ ಮುಖರ್ಜಿ ಅವರನ್ನು ಕಣಕ್ಕೆ ಇಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.