ಗ್ಯಾಂಗ್ಟಕ್: ಸಿಕ್ಕಿಂನಲ್ಲಿ ಬಹುಮತ ಗಳಿಸಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕನಾಗಿ ಪುನರಾಯ್ಕೆ ಆಗಿರುವ, ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಸೋಮವಾರ ರಾಜ್ಯಪಾಲ ಲಕ್ಷ್ಮಣ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ನಿರ್ಣಯ ಮಂಡಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಅವರು, ತಮ್ಮನ್ನು ಸಿಎಲ್‌ಪಿ ನಾಯಕನಾಗಿ ಆಯ್ಕೆ ಮಾಡಿದ ನಿರ್ಣಯದ ಪ್ರತಿಯನ್ನು ನೀಡಿ ಹಕ್ಕು ಪ್ರತಿಪಾದಿಸಿದರು. ಈ ವೇಳೆ ಹೊಸದಾಗಿ ಆಯ್ಕೆಯಾದ ಎಲ್ಲಾ ಎಸ್‌ಕೆಎಂ ಶಾಸಕರು ಉಪಸ್ಥಿತರಿದ್ದರು. ರಾಜ್ಯಪಾಲ ಆಚಾರ್ಯ ಅವರು ನೂತನವಾಗಿ ಆಯ್ಕೆಯಾದ ಶಾಸಕರನ್ನು ಅಭಿನಂದಿಸಿ ಶುಭ ಹಾರೈಸಿದರು.
.ಸಿಕ್ಕಿಂ: ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ.
ಮುಖ್ಯಮಂತ್ರಿ ಮತ್ತು ಅವರ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಯಾವಾಗ ನಡೆಯಲಿದೆ ಎಂಬುದು ತಕ್ಷಣಕ್ಕೆ ತಿಳಿದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ನೂತನ ಸರ್ಕಾರ ರಚನೆಗೆ ಪೂರಕವಾಗಿ, ನಿರ್ಗಮಿತ ಮುಖ್ಯಮಂತ್ರಿಯಾಗಿ ತಮಾಂಗ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೊಸ ಸರ್ಕಾರ ರಚನೆ ಆಗುವವರೆಗೂ ಅವರು ಉಸ್ತುವಾರಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ.

ಏಪ್ರಿಲ್ 18ರಂದು ನಡೆದ ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ(ಜೂನ್ 2) ಹೊರಬಿದ್ದಿದೆ. ರಾಜ್ಯದ 32 ಕ್ಷೇತ್ರಗಳ ಪೈಕಿ ಎಸ್‌ಕೆಎಂ 31 ಸ್ಥಾನಗಳನ್ನು ಗೆದ್ದುಕೊಂಡಿದೆ. ಪ್ರತಿಪಕ್ಷ ಎಸ್‌ಡಿಎಫ್ ಒಂದು ಸ್ಥಾನವನ್ನು ಪಡೆದುಕೊಂಡಿದೆ.
.Sikkim Election Result: 2ನೇ ಸಲ ಅಧಿಕಾರಕ್ಕೇರಿದ ತಮಾಂಗ್ ಬಗ್ಗೆ ಒಂದಿಷ್ಟು....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.