ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳ್ ನೀಧಿ ಮಯಂ (ಎಂಎನ್‌ಎಂ) ಪಕ್ಷದ ಸ್ಥಾಪಕ, ನಟ, ರಾಜಕಾರಣಿ ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯು ಏಪ್ರಿಲ್ 6ರಂದು ನಡೆಯಲಿದ್ದು, ಮೇ 2ರಂದು ಮತ ಎಣಿಕೆಯೊಂದಿಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ:ಕಮಲ್ ಹಾಸನ್ ತೃತೀಯ ರಂಗದ ಸಿಎಂ ಅಭ್ಯರ್ಥಿ: ಶರತ್ ಕುಮಾರ್ ಘೋಷಣೆ

ಗುರುವಾರವಷ್ಟೇಮಕ್ಕಳ್ ನೀಧಿ ಮಯಂಚುನಾವಣೆಗೆ ಸ್ಪರ್ಧಿಸಲಿರುವ 70 ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಿತ್ತು.

ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಉತ್ತಮ ಆಡಳಿತ ನೀಡುವುದು ಪಕ್ಷದ ಗುರಿಯಾಗಿದೆ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ದಿವಂಗತ ತಂದೆ ಶ್ರೀನಿವಾಸನ್ ಅವರನ್ನು ಸ್ಮರಿಸಿರುವ ಕಮಲ್ ಹಾಸನ್, 'ನಾನು ಐಎಎಸ್ ಅಧಿಕಾರಿಯಾಗಬೇಕೆಂಬುದು ನನ್ನ ತಂದೆಯ ಕನಸಾಗಿತ್ತು. ಅವರ ಕನಸನ್ನು ನನಸಾಗಿಸಲು ಸಾಧ್ಯವಾಗದಿದ್ದರೂ ನನ್ನ ಪಕ್ಷವು ಅನೇಕ ಐಎಎಸ್ ಅಧಿಕಾರಿಗಳನ್ನು ಒಳಗೊಂಡಿದೆ. ಇದು ನನಗೆ ಹೆಮ್ಮೆಯ ಕ್ಷಣವಾಗಿದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿಇದೇ ಮೊದಲ ಬಾರಿಗೆ ಮಕ್ಕಳ್ ನೀಧಿ ಮಯಂ ಪಕ್ಷವು ಸ್ಪರ್ಧೆಗಿಳಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.