ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಯ ವಿರುದ್ಧ ಕರ್ನಾಟಕ ಸರ್ಕಾರ ಕೈಗೊಂಡ ನಿರ್ಣಯವನ್ನು ತಮಿಳುನಾಡು ಸರ್ಕಾರ ತೀವ್ರವಾಗಿ ಖಂಡಿಸಿದೆ.

ಅಂತರರಾಜ್ಯ ನದಿ ನೀರು ಬಿಕ್ಕಟ್ಟು ಪರಿಹಾರಕ್ಕಾಗಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ನಿರ್ಧಾರಕ್ಕಾಗಿ ಮಂಗಳವಾರ ಶಾಸಕರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಜುಲೈ 15ರ ಪ್ರಕಾರ ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ 75.586 ಟಿಎಂಸಿ ಅಡಿ ನೀರು ಶೇಖರಣೆಯಾಗಿದೆ. ಆದರೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಕೇವಲ 13.808 ಟಿಎಂಸಿ ಅಡಿ ನೀರಿದೆ ಎಂದು ಅವರು ಸೋಮವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಅಗತ್ಯವಿರುವಷ್ಟು ಮಳೆಯಾಗಲಿದೆ. ಆದಾಗ್ಯೂ, ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ನಿರ್ದೇಶನದ ಪ್ರಕಾರ ನೀರು ಬಿಡಲು ನಿರಾಕರಿಸುತ್ತಿದೆ. ಈ ಮೂಲಕ ತಮಿಳುನಾಡು ರೈತರಿಗೆ ದ್ರೋಹ ಬಗೆಯುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು’ ಎಂದಿದ್ದಾರೆ.

ಜುಲೈ ತಿಂಗಳ ಅಂತ್ಯದವರೆಗೆ ಪ್ರತಿದಿನ ಒಂದು ಟಿಎಂಸಿ ಅಡಿಯಷ್ಟು ನೀರು ಬಿಡಬೇಕು ಎಂದು ಸಿಡಬ್ಲ್ಯುಆರ್ಸಿ ಕರ್ನಾಟಕ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ‘ತಮಿಳುನಾಡಿಗೆ ಪ್ರತಿದಿನ 8 ಸಾವಿರ ಕ್ಯುಸೆಕ್ ನೀರು ಹರಿಸಲು ಕರ್ನಾಟಕ ಸರ್ಕಾರ ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.