ಚೆನ್ನೈ: ₹ 12,100 ಕೋಟಿ ಮೊತ್ತದ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ.

ರಾಜ್ಯದ 16.43 ಲಕ್ಷ ರೈತರಿಗೆ ಈ ಸಾಲ ಮನ್ನಾ ಯೋಜನೆಯಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ವಿಧಾನಸಭೆಯಲ್ಲಿ ಹೇಳಿದರು.

‘ಈ ಯೋಜನೆ ತಕ್ಷಣವೇ ಜಾರಿಗೆ ಬರಲಿದ್ದು, ಅಗತ್ಯವಿರುವ ಅನುದಾನವನ್ನು ಶೀಘ್ರವೇ ಒದಗಿಸಲಾಗುವುದು’ ಎಂದೂ ಅವರು ಹೇಳಿದರು.

ಓದಿ:ರಾಷ್ಟ್ರಧ್ವಜಕ್ಕೆ ಅವಮಾನ; ರೈತರ ಕುಟುಂಬದ ವಿರುದ್ಧ ಎಫ್ಐಆರ್

‘ನೀಡಿರುವ ಭರವಸೆಗಳನ್ನು ಈಡೇರಿಸುವ ಜೊತೆಗೆ, ಹೊಸದಾಗಿ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಏಕೈಕ ಪಕ್ಷವೆಂದರೆ ಎಐಎಡಿಎಂಕೆ ಮಾತ್ರ’ ಎಂದರು.

‘ಅರ್ಹ ರೈತರಿಗೆ ತಲಾ ಎರಡು ಎಕರೆ ಜಮೀನು ನೀಡುವುದಾಗಿ ಡಿಎಂಕೆ ಘೋಷಿಸಿತ್ತು. ಆದರೆ, ಅದು ತನ್ನ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ’ ಎಂದು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು.

ಓದಿ:ಹರಿಯಾಣದಲ್ಲಿ ಲಗ್ನ ಪತ್ರಿಕೆ ಮೇಲೆ ‘ರೈತ ಪರ ಘೋಷಣೆ‘

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.