ಚೆನ್ನೈ: ಪೊಂಗಲ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ಜನರಿಗೆ ₹1,000 ನಗದು ಉಡುಗೊರೆಯನ್ನು ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ಜನವರಿ 15 ರಂದು ಪೊಂಗಲ್ ಆಚರಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ಉದ್ಯೋಗಿಗಳನ್ನು ಹೊರತುಪಡಿಸಿ ಎಲ್ಲಾ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ 'ಪೊಂಗಲ್ ಉಡುಗೊರೆ'ಯಾಗಿ ಸಾವಿರ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿಯನ್ನು ಉಲ್ಲೇಖಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಕಬ್ಬು, ತಲಾ ಒಂದು ಕೆ.ಜಿ ಅಕ್ಕಿ ಹಾಗೂ ಸಕ್ಕರೆಯನ್ನು ಒಳಗೊಂಡಿರುವ ಪೊಂಗಲ್ ಗಿಫ್ಟ್ ಹ್ಯಾಂಪರ್ ಅನ್ನು ಸರ್ಕಾರ ಈಗಾಗಲೇ ಘೋಷಿಸಿದೆ. ಪೊಂಗಲ್ ಗಿಫ್ಟ್ ಹ್ಯಾಂಪರ್ ಜತೆಗೆ ಉಚಿತ ಧೋತಿ ಮತ್ತು ಸೀರೆಗಳನ್ನು ಸಹ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇದಲ್ಲದೇ 'ಕಲೈನರ್ ಮಗಳಿರ್ ಉರಿಮೈ ತಿಟ್ಟಂ'(Kalaignar Magalir Urimai Thittam) ಯೋಜನೆಯಡಿ ಮಾಸಿಕವಾಗಿ ನೀಡಲಾಗುವ ₹1,000 ಅನ್ನು ಪೊಂಗಲ್ ಹಬ್ಬದ ಐದು ದಿನಗಳ ಮೊದಲು ಅಂದರೆ ಜನವರಿ 10 ರಂದು ಪಾವತಿಸಲಾಗುವುದು. ಮೊತ್ತವನ್ನು ಫಲಾನುಭವಿಗಳ ಆಯಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಇದರಿಂದ ಕುಟುಂಬದ 1.15 ಕೋಟಿ ಮಹಿಳೆಯರಿಗೆ ಪ್ರಯೋಜನವಾಗಲಿದೆ ಎಂದು ಸರ್ಕಾರ ತಿಳಿಸಿದೆ.
.ತಮಿಳುನಾಡಿನಲ್ಲಿ ಪಡಿತರ ಚೀಟಿದಾರರಿಗೆ ₹1,000 ಪೊಂಗಲ್ ಉಡುಗೊರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.