ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆಗೆ(ಸಿಎಎ) ವಿರೋಧ ವ್ಯಕ್ತಪಡಿಸಿರುವ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್, ತಮಿಳುನಾಡಿನಲ್ಲಿ ಕಾಯ್ದೆ ಜಾರಿಗೊಳಿಸದಂತೆ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಪಕ್ಷದ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

‘ಒಡಕುಂಟು ಮಾಡುವ ರಾಜಕೀಯ ಉದ್ದೇಶದಿಂದ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸ್ವೀಕಾರಾರ್ಹವಲ್ಲ. ತಮಿಳುನಾಡಿನಲ್ಲಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂಬ ಬಗ್ಗೆ ಜನರಿಗೆ ಡಿಎಂಕೆ ಸರ್ಕಾರ ಖಾತರಿಪಡಿಸಬೇಕು’ ಎಂದು ಹೇಳಿದರು.

ವಿಜಯ್ ಸೇರಿದಂತೆ ‘ಮಕ್ಕಳ ನೀಧಿ ಮಯಂ’ ಪಕ್ಷದ ನಾಯಕ ಕಮಲ್ ಹಾಸನ್, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಸಿಪಿಐಎಂನ ಸೀತಾರಾಂ ಯೆಚೂರಿ ಅವರೂ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ, ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. 2026ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ವಿಜಯ್ ಈಗಾಗಲೇ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.