ಬೆಂಗಳೂರು: ತಮಿಳುನಾಡಿನಲ್ಲಿ 12ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರಗಳ ಅವಧಿಯಲ್ಲಿ ವರದಿಯಾಗಿರುವ ನಾಲ್ಕನೇ ಪ್ರಕರಣ ಇದಾಗಿದೆ.

ಮಂಗಳವಾರ ತಮಿಳುನಾಡಿನ ವಿರುಧ್ನಗರ್ನಲ್ಲಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯ್ಯಂಪಟ್ಟಿ ಗ್ರಾಮದಲ್ಲಿರುವ ಮನೆಯಲ್ಲಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ವಿರುಧ್ನಗರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ್ದಾರೆ.

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ 3ನೇ ಪ್ರಕರಣ

13 ಜುಲೈನಿಂದ ಈವರೆಗೆ 12ನೇ ತರಗತಿಯ ಇತರ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಮಿಳುನಾಡಿನಲ್ಲಿ ಆತಂಕಕ್ಕೆ ಕಾರಣವಾಗಿದೆ.

ತಮಿಳುನಾಡು ವಿದ್ಯಾರ್ಥಿನಿ ಸಾವು ಪ್ರಕರಣ: ಶಿಕ್ಷಕರ ಸೆರೆ, ಕೇಸು ಸಿಬಿಸಿಐಡಿಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.