ಚೆನ್ನೈ: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಶುಭಕೋರುವ ಸಲುವಾಗಿ ವೈಯಕ್ತಿಕವಾಗಿ ತಮ್ಮನ್ನು ಭೇಟಿಯಾಗುವುದು ಬೇಡ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಬುಧವಾರ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಸಂದೇಶ ಕಳುಹಿಸಿರುವ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ತಮ್ಮನ್ನು ಭೇಟಿಯಾಗಿ ಶುಭ ಕೋರಲು ಬರುತ್ತಾರೆ. ಇದರಿಂದ ಜನಸಂದಣಿ ಉಂಟಾಗುತ್ತದೆ. ಅಲ್ಲದೆ, ಸೋಂಕು ಹರಡುವ ಸಾಧ್ಯತೆಯೂ ಹೆಚ್ಚಿರುತ್ತದೆ. ಅದಕ್ಕೆ ಅವಕಾಶ ಕೊಡುವುದು ಬೇಡ ಎನ್ನುವುದು ಸ್ಟಾಲಿನ್ ಅವರ ಉದ್ದೇಶವಾಗಿದೆ.

ತಮಿಳುನಾಡು ಐಫೋನ್ ಘಟಕದಲ್ಲಿ ಉತ್ಪಾದನೆ ಪುನರಾರಂಭ

ನಾವೆಲ್ಲರೂ ಕೋವಿಡ್–19 ಸಂಬಂಧಿತ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಅದರಲ್ಲಿ ಯಾವುದೇ ರಿಯಾಯಿತಿಯಿಲ್ಲ. ಹೀಗಾಗಿ ವೈಯಕ್ತಿಕ ಭೇಟಿ ಬೇಡ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ನವರು ತಮಿಳುನಾಡು ವಿರುದ್ಧ ಪ್ರತಿಭಟನೆ ಮಾಡಲಿ: ಸಚಿವ ಬಿ.ಸಿ. ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.