ತಿರುಚಿನಾಪಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಪಕ್ಷದ ಅಭ್ಯರ್ಥಿಗಳ ಪರ ಇಂದಿನಿಂದ ಪ್ರಚಾರ ಆರಂಭಿಸಿದ್ದಾರೆ.

ಪ್ರಚಾರದ ಮೊದಲ ದಿನವಾದ ಇಂದು, ತಿರುಚಿನಾಪಳ್ಳಿ ಅಭ್ಯರ್ಥಿ ದುರೈ ವೈಕೊ ಮತ್ತು ಪೆರಂಬಲೂರಿನಲ್ಲಿ ಡಿಎಂಕೆಯ ಅರುಣ್ ನೆಹರು ಅವರ ಪರವಾಗಿ ಸ್ಟಾಲಿನ್ ಮತಯಾಚನೆ ಮಾಡಲಿದ್ದಾರೆ.

ತಿರುಚನಾಪಳ್ಳಿಯಲ್ಲಿ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿ ಮುಂದಿನ ದಿನಗಳಲ್ಲಿ ಪುದುಚೇರಿ ಹೊರತುಪಡಿಸಿ ರಾಜ್ಯದ ಎಲ್ಲಾ 39 ಲೋಕಸಭಾ ಸ್ಥಾನಗಳನ್ನು ಒಳಗೊಂಡು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಏಪ್ರಿಲ್ 17 ರಂದು ಚೆನ್ನೈನಲ್ಲಿ ಪ್ರಚಾರವನ್ನು ಮುಕ್ತಾಯಗೊಳಿಸಲಿದ್ದು, ಅಂದು ದಕ್ಷಿಣ ಚೆನ್ನೈ ಮತ್ತು ಸೆಂಟ್ರಲ್ ಚೆನ್ನೈ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ಮತದಾನದ ದಿನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.