ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ ತಾಂಜೇನಿಯಾ ಅಧ್ಯಕ್ಷೆ ಸಾಮಿಯಾ ಸುಲುಹು

Published : 9 ಅಕ್ಟೋಬರ್ 2023, 6:02 IST
Last Updated : 9 ಅಕ್ಟೋಬರ್ 2023, 6:02 IST
ಫಾಲೋ ಮಾಡಿ
Comments

ನವದೆಹಲಿ: ತಾಂಜೇನಿಯಾ ಅಧ್ಯಕ್ಷೆ ಸಾಮಿಯಾ ಸುಲುಹು ಅವರು ಇಂದು (ಸೋಮವಾರ) ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ಭಾನುವಾರ ದೆಹಲಿಗೆ ಬಂದಿಳಿದ ಸುಲುಹು ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತಿಸಿ, ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಾಮಿಯಾ, ‘ಭಾರತ ಮತ್ತು ತಾಂಜೇನಿಯಾ ನಡುವೆ ದಶಕಗಳಿಂದ ಉತ್ತಮ ಸಂಬಂಧ ಮುಂದುವರಿದಿರುವುದಕ್ಕಾಗಿ ನಮ್ಮ ದೇಶದ ಪರವಾಗಿ ಮೆಚ್ಚುಗೆ ವ್ಯಕ್ತಪಡಿಸಲು ಬಯಸುತ್ತೇನೆ. ನಾವು ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಮತ್ತು ಆರ್ಥಿಕ ಕ್ಷೇತ್ರ ಅಭಿವೃದ್ಧಿಗೆ ಪೂರಕವಾದ ಚರ್ಚೆ ನಡೆಸಲಿದ್ದೇವೆ. ನಮ್ಮ ಪೂರ್ವಿಕರು ಸ್ಥಾಪಿಸಿದ ನಮ್ಮ ದ್ವಿಪಕ್ಷೀಯ ಸಂಬಂಧ ಮುಂದಿನ ಹಲವು ದಶಕಗಳವರೆಗೆ ಮುಂದುವರಿಯಲಿದೆ ಎನ್ನುವುದು ನಮ್ಮ ನಿರೀಕ್ಷೆಯಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT