ದಾಹೋದ್: ಗುಜರಾತ್ನ ದಾಹೋದ್ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಖಾಲ್ತಾ ಗ್ರಾಮದ ಬುಡಕಟ್ಟು ಸಮುದಾಯದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಕಲ್ಪೇಶ್ ಬರಿಯಾ ಎಂದು ಗುರುತಿಸಲಾಗಿದೆ.

ಕಲ್ಪೇಶ್ ಅಡುಗೆ ಮಾಡುವ ನೆಪದಲ್ಲಿ ವಸತಿ ಶಾಲೆಯಲ್ಲಿರುವ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ತನ್ನ ಸಹೋದರಿಯ ನೆರವಿನಿಂದ ಬಾಲಕಿ ಪಾರಾಗಿದ್ದಾಳೆ.

ನಂತರ ಬಾಲಕಿಯ ಸಹೋದರಿ ತನ್ನ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ನೀಡಿದ ದೂರು ಆಧರಿಸಿ ಕಲ್ಪೇಶ್ನನ್ನು ಬಂಧಿಸಲಾಗಿದೆ ಎಂದು ಧನಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.