ಜಲಪಾಯಿಗುಡಿ: ಬಾಲಕಿಯ ಮೇಲೆ ನಾಲ್ವರು ಬಾಲಕರು ಸೇರಿ ಏಳು ಮಂದಿ ಅತ್ಯಾಚಾರ ಎಸಗಿರುವ ಘಟನೆ ಪಶ್ಚಿಮ ಬಂಗಾಳದ ಜಲಪಾಯಿಗುಡಿಯ ಟೀ ಎಸ್ಟೇಟ್ನಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.

ಆರೋಪಿಗಳನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿದೆ. ಮೂವರು ವಯಸ್ಕ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಮತ್ತೊಬ್ಬನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿ ಬಾಲಕರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಬಾಲಕಿಯ ಪ್ರಿಯಕರ ಎಂದು ಹೇಳಲಾದ ಒಬ್ಬ ಆರೋಪಿಯು ಆಕೆಯನ್ನು ಭಾನುವಾರ ಎಸ್ಟೇಟಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಅಲ್ಲಿ ಏಳು ಮಂದಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಕೃತ್ಯದ ವಿಡಿಯೊವನ್ನು ಸೆರೆಹಿಡಿದಿದ್ದಾರೆ ಎಂದು ಹೇಳಿದರು.

ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿದ ನಂತರ ಬಾಲಕಿಯ ಕುಟುಂಬಸ್ಥರು ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.