ಹೈದರಾಬಾದ್: ಬಾಲಕರ ಗುಂಪೊಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರತಿಮೆಯ ಮೇಲೆ ಪಟಾಕಿ ಸಿಡಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃತ್ಯದ ಬಳಿಕ ತಮ್ಮ ತಪ್ಪಿನ ಅರಿವಾಗಿ ಬಾಲಕರು ಕ್ಷಮೆಯಾಚಿಸಿದ್ದಾರೆ.

ಮಹಾತ್ಮ ಗಾಂಧಿ ಪ್ರತಿಮೆಯ ಮೇಲೆ ನಿಂತಿದ್ದ ಬಾಲಕರು ಪಟಾಕಿಗಳನ್ನು ಸಿಡಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಬೋವೆನಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರಿಗೆ ಮನವಿ ಮಾಡಿದ್ದರು.

ಕೂಡಲೇ ಎಚ್ಚತ್ತ ಹೈದರಾಬಾದ್ ಸಿಟಿ ಪೊಲೀಸರು ಪಟಾಕಿ ಸಿಡಿಸಿದ್ದ ಬಾಲಕರನ್ನು ಪತ್ತೆಹಚ್ಚಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ‘ಯುವ ಜನತೆ ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯನ್ನು ಹೊಂದಿದ್ದೀರಿ. ಇತಿಹಾಸದ ಪಾಠಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಸ್ಫೂರ್ತಿ ನಮಗೆ ಭವಿಷ್ಯದ ಹಾದಿಯನ್ನು ತೋರಿಸುತ್ತದೆ. ನಿಮ್ಮ ತಪ್ಪನ್ನು ಅರಿತುಕೊಂಡು ಕ್ಷಮೆಯಾಚಿಸಿರುವುದು ಉತ್ತಮ ನಡೆ’ ಎಂದು ಬರೆದುಕೊಂಡಿದ್ದಾರೆ.

ಬಾಲಕರು ತಪ್ಪಿನ ಅರಿವಾದ ಬಳಿಕ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರ ಹಾಕುವ ಮೂಲಕ ಭವಿಷ್ಯದಲ್ಲಿ ಇಂತಹ ತಪ್ಪು ಎಂದಿಗೂ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ.

‘ನಮ್ಮ ಮಕ್ಕಳು ತಿಳಿಯದೆ ತಪ್ಪು ಮಾಡಿದ್ದಾರೆ, ಅವರನ್ನು ಕ್ಷಮಿಸಿ. ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಬುದ್ಧಿ ಹೇಳುತ್ತೇವೆ’ ಎಂದು ಪೋಷಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.