ಅಹಮದಾಬಾದ್: 2002ರ ಗುಜರಾತ್ ಕೋಮುಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿರುವ ಆರೋಪದಲ್ಲಿ ಬಂಧಿತವಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಡಿಜಿಪಿ ಆರ್.ಬಿ. ಶ್ರೀಕುಮಾರ್ ಅವರನ್ನು ಇಲ್ಲಿನ ಮೆಟ್ರೊಪಾಲಿಟನ್ ನ್ಯಾಯಾಲಯವು ಶನಿವಾರ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿದೆ.

‘ಪೊಲೀಸ್ ಕಸ್ಟಡಿ ಮುಗಿದ ಬಳಿಕ ಇಬ್ಬರನ್ನೂ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಯಿತು. ಪೊಲೀಸರು ಅವರನ್ನು ಹೆಚ್ಚಿನ ಕಸ್ಟಡಿಗೆ ನೀಡುವಂತೆ ಕೋರಿಲ್ಲ’ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಅಮಿತ್ ಪಟೇಲ್ ತಿಳಿಸಿದ್ದಾರೆ.

ವಂಚನೆ, ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಬಂಧನ: ಅಧಿಕಾರಿಗಳು

‘ತನಿಖಾಧಿಕಾರಿಯು ಬಂಧಿತರನ್ನು ಕಸ್ಟಡಿಗೆ ನೀಡುವಂತೆ ಕೋರಿಲ್ಲ. ಹಾಗಾಗಿ, ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಲಾಗಿದೆ’ ಎಂದು ಪಟೇಲ್ ತಿಳಿಸಿದ್ದಾರೆ.

‘ತೀಸ್ತಾ ಮತ್ತು ಶ್ರೀಕುಮಾರ್ ಅವರು ತನಿಖಾ ಅಧಿಕಾರಿಗಳೊಂದಿಗೆ ಕೈಜೋಡಿಸಿ ಸಂಚು ರೂಪಿಸುವ ಮೂಲಕ ನಕಲಿ ದಾಖಲೆಗಳು, ಸಾಕ್ಷ್ಯಗಳನ್ನು ಸೃಷ್ಟಿಸಿ ಅಪರಾಧ ಕೃತ್ಯವೆಸಗಿದ್ದಾರೆ’ ಎಂದು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಡಿ.ಬಿ. ಬರಾದ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.