ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ ಪಕ್ಷ ಸೋಲುತ್ತದೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಪಕ್ಷದ ‘ವಿಜಯಭೇರಿ’ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯು ಸಾಮಾನ್ಯ ಜನರ ತೆಲಂಗಾಣ ಹಾಗೂ ಉಳಿಗಮಾನ್ಯ ಸಮಾಜವಿರುವ ತೆಲಂಗಾಣ ನಡುವೆ ನಡೆಯಲಿದೆ. ರಾಜ ಮತ್ತು ಜನರ ಈ ಹೋರಾಟದ ಚುನಾವಣೆಯಲ್ಲಿ ಕೆಸಿಆರ್ ಸೋಲುತ್ತದೆ ಎಂದು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಎಲ್ಲಾ ನಿಯಂತ್ರಣಗಳು ಒಂದೇ ಕುಟುಂಬದ ಬಳಿ ಇವೆ. ಬಿಆರ್ಎಸ್ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾದರೂ ಮುಖ್ಯಮಂತ್ರಿ ಕೆಸಿಆರ್ ಅವರು ಜನರಿಂದ ದೂರವಾಗುತ್ತಲೇ ಇದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆ ಬಡವರು, ಬಂಡವಾಳಶಾಹಿಗಳ ನಡುವಿನ ಸ್ಪರ್ಧೆ: ಮುಖ್ಯಮಂತ್ರಿ ಜಗನ್

ಬಿಜೆಪಿಯು ಇ.ಡಿ (ಜಾರಿ ನಿರ್ದೇಶನಾಲಯ), ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಸಿಕೊಂಡು ಎಲ್ಲಾ ಪ್ರತಿಪಕ್ಷ ನಾಯಕರ ಮೇಲೆ ದಾಳಿ ಮಾಡಿಸುವ ಮೂಲಕ ಪ್ರಕರಣಗಳನ್ನು ದಾಖಲಿಸುತ್ತಿದೆ. ಆದರೆ, ಕೆಸಿಆರ್ ಒಬ್ಬರನ್ನು ಉಳಿಸಿದ್ದಾರೆ ಎಂದು ರಾಹುಲ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.