ಹೈದರಾಬಾದ್: ತೆಲಂಗಾಣದ ಎಲ್ಲಾ 119 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಗುರುವಾರ) ಬೆಳಿಗ್ಗೆ 7ರಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6ರವರೆಗೆ ನಡೆಯಲಿದೆ.

ಆಡಳಿತಾರೂಢ ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಕಣದಲ್ಲಿರುವ ಪ್ರಮುಖ ಪಕ್ಷಗಳು. ಹೈದರಾಬಾದ್‌ನ ಕೆಲವೆಡೆ ಎಐಎಂಐಎಂ ಕೂಡ ಸ್ಪರ್ಧಿಸಿದೆ.

119 ಕ್ಷೇತ್ರಗಳಿರುವ ತೆಲಂಗಾಣ ವಿಧಾನಸಭೆಗೆ 3.17 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿದಂತೆ 109 ಪಕ್ಷಗಳಿಂದ ಒಟ್ಟು 2,290 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ರಾಜ್ಯದಾದ್ಯಂತ 35,655 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. 2.8 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. 12 ಸಾವಿರ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸ್ಪರ್ಧಿಗಳಲ್ಲಿ 221 ಮಹಿಳೆಯರು ಹಾಗೂ ಓರ್ವ ತೃತೀಯ ಲಿಂಗಿ ಸೇರಿದ್ದಾರೆ. ಒಟ್ಟು 103 ಮಂದಿ ಶಾಸಕರು ಈ ಬಾರಿ ಮರು ಸ್ಪರ್ಧಿಸುತ್ತಿದ್ದು, ಬಹುತೇಕರು ಆಡಳಿತಾರೂಢ ಬಿಆರ್‌ಎಸ್‌ನಿಂದ ಕಣಕ್ಕಿಳಿದಿದ್ದಾರೆ.

‘ತೆಲಂಗಾಣದಲ್ಲಿ ಪ್ರಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸುಮಾರು 27,600 ಮತದಾರರು ಮನೆಯಿಂದಲೇ ಮತ ಚಲಾಯಿಸಲಿದ್ದಾರೆ' ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ. ಡಿ.3ರಂದು ಮತ ಎಣಿಕೆ ನಡೆಯಲಿದೆ.
.ತೆಲಂಗಾಣ ಚುನಾವಣಾ ಯಾತ್ರೆ | ಜನಪ್ರಿಯ ಕೆಸಿಆರ್ಗೆ ಭರವಸೆಗಳೇ ಭಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.