ಹೈದರಾಬಾದ್: ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ಗುರುವಾರ ಚಾಲನೆ ನೀಡಿದರು.

ಇಲ್ಲಿನ ಸಚಿವಾಲಯದಲ್ಲಿ ನಡೆದ ಸಮಾರಂಭದಲ್ಲಿ ರೇವಂತ ರೆಡ್ಡಿ ಅವರು ಕೆಲ ರೈತರಿಗೆ ಸಾಂಕೇತಿಕವಾಗಿ ಚೆಕ್ಗಳನ್ನು ಹಸ್ತಾಂತರಿಸಿದರು. ನಂತರ, ವಿಡಿಯೊ ಕಾನ್ಫರೆನ್ಸ್ ಮೂಲಕ ಕೆಲ ರೈತರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮೊದಲ ಹಂತದಲ್ಲಿ, ರೈತರ ₹1 ಲಕ್ಷ ವರೆಗಿನ ಸಾಲ ಮನ್ನಾ ಮಾಡಲಾಗುತ್ತಿದ್ದು, ₹6,098 ಕೋಟಿಯನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಅಂದಾಜು 11 ಲಕ್ಷ ರೈತಾಪಿ ಕುಟುಂಬಗಳಿಗೆ ಲಾಭ ಸಿಗಲಿದೆ’ ಎಂದರು.

‘ಈ ಯೋಜನೆಯನ್ನು ಒಟ್ಟು ಮೂರು ಹಂತದಲ್ಲಿ ಜಾರಿಗೊಳಿಸಲಾಗುವುದು. ಎರಡನೇ ಹಂತದಲ್ಲಿ, ₹1.5 ಲಕ್ಷ ವರೆಗಿನ ಬೆಳೆ ಸಾಲವನ್ನು ಈ ತಿಂಗಳಾಂತ್ಯಕ್ಕೆ ಮನ್ನಾ ಮಾಡಲಾಗುವುದು’ ಎಂದರು.

‘₹2 ಲಕ್ಷದವರೆಗಿನ ಕೃಷಿ ಸಾಲವನ್ನು ಆಗಸ್ಟ್ನಲ್ಲಿ ಮನ್ನಾ ಮಾಡಲಾಗುವುದು. ಒಟ್ಟು ₹31 ಸಾವಿರ ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.