ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮಾಜಿ ಸಿಎಂ ಹಾಗೂ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಯಶೋಧ ಹಾಸ್ಪಿಟಲ್ಸ್ನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ 69 ವರ್ಷದ ಕೆ. ಚಂದ್ರಶೇಖರ್ ರಾವ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಮೂಳೆ ಜೋಡಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಕೆಸಿಆರ್ ಅವರಿಗೆ ತೊಡೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಚೇತರಿಸಿಕೊಳ್ಳಲು ಆರರಿಂದ ಎಂಟು ವಾರ ಬೇಕಾಗುತ್ತದೆ. ಕೆಸಿಆರ್ ಅವರ ಮೇಲ್ವಿಚಾರಣೆಯನ್ನು ವೈದ್ಯರ ತಂಡವೊಂದು ನಿರಂತರವಾಗಿ ಮಾಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ವೈದ್ಯರು ತಿಳಿಸಿದ್ದರು.

ಈಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗೆದ್ದುಗೆ ಏರಿತ್ತು. ಇತ್ತ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) 39 ಸ್ಥಾನಗಳಲ್ಲಿ ಮಾತ್ರ ಗೆದ್ದು ಹಿನ್ನಡೆ ಅನುಭವಿಸಿತ್ತು. ಇತ್ತ ಬಿಜೆಪಿ 8, ಎಐಎಂಐಎಂ 7 ಹಾಗೂ ಪಕ್ಷೇತರರು 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
.ತೆಲಂಗಾಣ ಮಾಜಿ ಸಿಎಂ ಕೆಸಿಆರ್ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ.ಯಾರಿಗೆ ಯಾವ ಖಾತೆ? ಇಲ್ಲಿದೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಪುಟದ ವಿವರ.ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.